ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ’

Last Updated 10 ಜನವರಿ 2014, 19:59 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ‘ಶಿಕ್ಷಣ ಕ್ಷೇತ್ರಕ್ಕೆ ಮಠ­ಗಳು ಅಪಾರ  ಕೊಡುಗೆ ನೀಡುತ್ತಿದ್ದು, ಇಲ್ಲಿ ಪ್ರವೇಶ ಪಡೆದವರು ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತು ಅಳವಡಿಸಿ­ಕೊಂಡು ಛಲದೊಂದಿಗೆ ಭವಿಷ್ಯ ರೂಪಿ­ಸಿಕೊಳ್ಳಲು ಪ್ರಯತ್ನಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ ಸಲಹೆ ನೀಡಿದರು.

ವಿಭೂತಿಪುರ ಮಠದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವೀರಭದ್ರ­ಸ್ವಾಮಿ ಉಚಿತ ವಸತಿ ಶಾಲೆಯ 5ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ಮಾಜಿ ಕ್ರೀಡಾಪಟು ಲಿಂಗಪ್ಪ, ‘ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿ­ಕೊಳ್ಳ­ಬೇಕು. ಪ್ರಾಥಮಿಕ ಹಂತದಲ್ಲಿ ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸ­ಬೇಕು’ ಎಂದರು.

ಮಠದ ಅಧ್ಯಕ್ಷ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ‘ವಸತಿ ಶಾಲೆಯಲ್ಲಿ ಎಲ್ಲ ವರ್ಗದ ಪ್ರತಿಭಾವಂತ ಬಡ ಮಕ್ಕಳಿಗೆ ಪ್ರವೇಶ ನೀಡಲಾಗುತ್ತಿದೆ. ಶಾಲೆಯಲ್ಲಿ ಈಗ 125 ವಿದ್ಯಾರ್ಥಿಗಳಿ­ದ್ದಾರೆ’ ಎಂದರು. 

‘ಪ್ರಜಾವಾಣಿ’ಯ ಕಾರ್ಯ ನಿರ್ವಾಹಕ ಸಂಪಾದಕ ಪದ್ಮರಾಜ ದಂಡಾವತಿ ಅವರು ಅಧ್ಯಕ್ಷತೆ ವಹಿಸಿದ್ದರು. ವಸತಿ ಶಾಲೆಯ ನಿರ್ದೇಶಕಿ ವಿಮಲಾ ಹಿರೇಮಠ್‌, ಉಮಾದೇವಿ  ಸ್ತ್ರೀಸಮಾ­ಜದ ಕಾರ್ಯದರ್ಶಿ ಪ್ರೇಮಾ, ವೀರಭದ್ರ ಸ್ವಾಮಿ ಶಾಲೆಯ ಮುಖ್ಯ ಶಿಕ್ಷಕರಾದ ಗುರುಮೂರ್ತಿ, ಕಲ್ಲಪ್ಪನ­ಮಠ, ಕಾರ್ಯ­ದರ್ಶಿ ಸಿ. ಬಸವರಾಜು ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT