ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಬಲತೆ ಸ್ವಾವಲಂಬಿ ಬದುಕಿಗೆ ದಾರಿ’

Last Updated 20 ಸೆಪ್ಟೆಂಬರ್ 2013, 9:00 IST
ಅಕ್ಷರ ಗಾತ್ರ

ಶಿಕಾರಿಪುರ: ಮಹಿಳೆಯರು ಆರ್ಥಿಕವಾಗಿ ಸಬಲರಾಗುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಸಂಘಗಳು ಸಹಕಾರಿಯಾಗಿವೆ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದ ವಿರಕ್ತಮಠದಲ್ಲಿ ಈಚೆಗೆ ನಡೆದ ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಪಾತ್ರ ಪ್ರಮುಖವಾಗಿದ್ದು, ಅಕ್ಕಮಹಾದೇವಿ ಮಹಿಳಾ ಸಹಕಾರ ಸಂಘ ಮಹಿಳೆಯರ ಆರ್ಥಿಕ ಸಬಲತೆಗೆ ಪೂರಕವಾಗಿ ಕಾರ್ಯನಿರ್ವಹಿಸುವ ಮೂಲಕ ಅಭಿವೃದ್ಧಿ ಹೊಂದುತ್ತಿರುವುದು ಉತ್ತಮ ಬೆಳವಣಿಗೆ ಎಂದರು. 

ಸಮಾರಂಭದ ನೇತೃತ್ವ ವಹಿಸಿದ್ದ ವಿರಕ್ತಮಠ ಚನ್ನಬಸವ ಸ್ವಾಮೀಜಿ ಮಾತನಾಡಿ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪರಸ್ಪರ ಸಹಕಾರ ಹಾಗೂ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಸಹಕಾರ ಸಂಘದ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ಕಾಳೇನಹಳ್ಳಿ ರೇವಣಸಿದ್ದ ಸ್ವಾಮೀಜಿ, ಪಂಡಿತ್‌ ರೇಣುಕಾಚಾರ್ಯ ನೇತೃತ್ವ ವಹಿಸಿದ್ದರು.
ಸಹಕಾರಿ ಸಂಘದ ಅಧ್ಯಕ್ಷೆ ರತ್ನಾ ಜಯಣ್ಣ ಅಧ್ಯಕ್ಷತೆ ವಹಿಸಿದ್ದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಚನ್ನವೀರಪ್ಪ, ಜಿಲ್ಲಾ ಯೂನಿಯನ್‌ ಅಧ್ಯಕ್ಷ ಬಿ.ಡಿ.ಭೂಕಾಂತ್‌, ಪುರಸಭೆ ಸದಸ್ಯ ಚಾರಗಲ್ಲಿ ಪರಶುರಾಮ್‌, ಸಂಘದ ಉಪಾಧ್ಯಕ್ಷೆ ನಿರ್ಮಲಾ ಜಯದೇವಪ್ಪ, ಕಾರ್ಯದರ್ಶಿ ಮಹೇಶ್‌ಕುಮಾರ್‌, ಸಹಕಾರಿ ಸಂಘಗಳ ನಿಬಂಧಕ ಜನಾರ್ದನ್‌, ಸಹಾಯಕ ನಿಬಂಧಕ ಜಯಪ್ರಕಾಶ್‌, ಸಹಕಾರಿ ಸಂಘದ ಇತರ ನಿರ್ದೇಶಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT