ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಸ್ಯೆ ಎದುರಿಸಿ ಕಾಂಗ್ರೆಸ್‌ ಜಯಭೇರಿ’

Last Updated 23 ಮಾರ್ಚ್ 2014, 11:03 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಉಡುಪಿ–ಚಿಕ್ಕಮಗ­ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ಕೈಗೊಳ್ಳಲು ಇದೇ 28ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿ­ದ್ದಾರೆಂದು ಕಾಂಗ್ರೆಸ್‌ ಜಿಲ್ಲಾ ಘಟಕ ಅಧ್ಯಕ್ಷ ಡಾ.ಡಿ.ಎಲ್.­ವಿಜಯ­ಕುಮಾರ್ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾ­ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರೇಮಗಳೂರಿನಲ್ಲಿ ಮಧ್ಯಾಹ್ನ 2ಗಂಟೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಪಕ್ಷದ ಅಭ್ಯರ್ಥಿ ಎಲ್ಲ ಬ್ಲಾಕ್‌ಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇದೇ 24ರಂದು ನಗರದ ಕೆ.ಎಂ. ರಸ್ತೆಯ ಗುತ್ತಿಗೆದಾರರ ಕಟ್ಟಡ­ದಲ್ಲಿ ಕೊಠಡಿಯಲ್ಲಿ ಪಕ್ಷದ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತು­ವಾರಿ ಸಚಿವ ಕೆ.ಅಭಯಚಂದ್ರ ಜೈನ್ ಉದ್ಘಾಟಿಸುತ್ತಿದ್ದು, ಅದೇ ದಿನ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಸಂಬಂ­ಧಿಸಿ­ದಂತೆ ಪಕ್ಷದ ಮುಖಂಡರ ಸಭೆ ನಡೆಯಲಿದೆ ಎಂದರು.

ಪಕ್ಷದ ಶಿಸ್ತು ಉಲ್ಲಂಘಿಸಿದ್ದ ಕೆಲವರನ್ನು ಈಗಾಗಲೇ ಅಮಾನತು­ಪಡಿಸಿದ್ದು, ಅವರ ಅಮಾನತು ಆದೇಶ ಹಿಂದಕ್ಕೆ ಪಡೆದು, ಚುನಾವಣಾ ಪ್ರಚಾರ ಕಾರ್ಯದಲ್ಲಿ ಅವರನ್ನು ತೊಡಗಿಸಿಕೊಳ್ಳಲಾಗುವುದು. ವೈಯ­ಕ್ತಿಕ ಕಾರಣಕ್ಕೆ ಶೃಂಗೇರಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಸೌಭಾಗ್ಯ ಅವರು ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕರಿಸಲಾಗಿದೆ. ಆ ಸ್‌್ಥಾನಕ್ಕೆ ನಟರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಶೃಂಗೇರಿ ಬ್ಲಾಕ್‌ನಲ್ಲಿ ಸೌಭಾಗ್ಯ ಸೇರಿದಂತೆ 10 ಜನರ ಸಮಿತಿ ಪ್ರಚಾರ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅವರು ಈಗಾಗಲೇ ಪ್ರಚಾರ ಕಾರ್ಯ­ದಲ್ಲಿ ನಿರತರಾಗಿದ್ದಾರೆಂದು ಹೇಳಿ­ದರು.

ಜಿಲ್ಲಾ ವಕ್ತಾರ ಎ.ಎನ್.ಮಹೇಶ್ ಮಾತನಾಡಿ, ಜಾತ್ಯತೀತ ನಿಲುವನ್ನು ಹೊಂದಿರುವ ಸಿಪಿಐ ಮುಖಂಡರು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಕುರಿತು ಆ ಪಕ್ಷದ ಮುಖಂಡ­ರೊಂದಿಗೆ ಮಾತುಕತೆ ನಡೆಸಲಾ­ಗುವುದು ಎಂದರು.

ಅಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಮುಂದಾಗಿವೆ. ಅಡಿಕೆ­ಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶಗ­ಳಿಗೆ ಎಂದು ಈಗಾಗಲೇ ಕಾಂಗ್ರೆಸ್‌ ಪಕ್ಷ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ಹೇಳುತ್ತಿರುವ ಅವರು  ಪ್ರಮಾಣ ಪತ್ರವನ್ನು ಜನರ ಮುಂದೆ ಪ್ರಕಟಪಡಿಸಲಿ ಎಂದು ಒತ್ತಾಯಿ­ಸಿದರು.

ಕುಡಿಯುವ ನೀರಿನ ಸಮಸ್ಯೆ ಬಯಲು ಪ್ರದೇಶದಲ್ಲಿ ತಲೆದೋರಿ­ದ್ದರೂ ಸಮಸ್ಯೆಗೆ ಸಚಿವರು ಸ್ಪಂದಿಸು­ತ್ತಿಲ್ಲ ಎಂದು ತಿಳಿಸಿದಾಗ, ಸಚಿವ­ರೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡು­ವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯೆ ಗಾಯತ್ರಿ­ಶಾಂತೇಗೌಡ ಇದೇ ಸಂದರ್ಭ ಉತ್ತರಿಸಿದರು.

ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಶ್ರೀಧರ್ ಉರಾಳ್, ನಗರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಅಕ್ಬರ್, ಎಪಿಎಂಸಿ ಸದಸ್ಯ ಭದ್ರೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT