ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾಜದ ಏಳಿಗೆಗೆ ಶ್ರಮಿಸಬೇಕು’

Last Updated 1 ಡಿಸೆಂಬರ್ 2013, 19:42 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್ಯ ವೈಶ್ಯ ಸಮಾಜದವರು ಒಗ್ಗೂಡಿ ಸಮಾಜದ ಏಳಿಗೆಗೆ ಶ್ರಮಿಸಬೇಕು’ ಎಂದು ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಹೇಳಿದರು. ಅಖಿಲ ಭಾರತ ಆರ್ಯ ವೈಶ್ಯ ಮಹಾಸಭಾ ಒಕ್ಕೂಟವು ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಬೇರೆ ಎಲ್ಲ ಸಮಾಜಗಳಿಗೆ ಸೌಲಭ್ಯ– ಸಹಕಾರಗಳನ್ನು ನೀಡುವಂತೆ ಆರ್ಯ ವೈಶ್ಯ ಸಮಾಜಕ್ಕೂ ನೀಡುತ್ತಿವೆ. ಆದರೆ, ಇವರು ಯಾವುದೇ ಸೌಲಭ್ಯಗಳನ್ನು ಪಡೆಯಲು ಮನಸ್ಸು ಮಾಡುತ್ತಿಲ್ಲ. ಕಚೇರಿಗಳಿಗೆ ಭೇಟಿ ನೀಡಿ ಅವುಗಳನ್ನು ಪಡೆಯಬೇಕು’ ಎಂದು ತಿಳಿಸಿದರು.

‘ಇಂದಿನ ದಿನಗಳಲ್ಲಿ ಶಿಕ್ಷಣ ಅತಿ ಮುಖ್ಯವಾಗಿದೆ. ಆದ್ದರಿಂದ, ಪ್ರತಿಯೊಬ್ಬರಿಗೂ ಶಿಕ್ಷಣವು ದೊರೆಯಲು ಸಂಘ ಸಂಸ್ಥೆಗಳು ಪ್ರಯತ್ನ ಪಡಬೇಕು’ ಎಂದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು, ‘ಬೇರೆ ಭಾಷೆಗಳನ್ನು ದ್ವೇಷಿಸದೆ, ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ನೀರು, ಉದ್ಯೋಗ ಮತ್ತು ಶಿಕ್ಷಣಕ್ಕೆ ರಾಷ್ಟ್ರೀಯ ನೀತಿಯನ್ನು ತರಬೇಕು. ಇದರಲ್ಲಿ ರಾಜ್ಯಪಾಲರುಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT