ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೌಂದರ್ಯ’ ಸಂಭ್ರಮ

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ದಾಸರಹಳ್ಳಿ ಹಾವನೂರು ಬಡಾವಣೆಯಲ್ಲಿರುವ ಸೌಂದರ್ಯ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ‘ಸಂಭ್ರಮ’ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಜಾನಪದ ನೃತ್ಯಗಳ ವಿವಿಧ ಪ್ರಕಾರಗಳನ್ನು ಮೈನವಿರೇಳಿಸುವಂತೆ ವಿದ್ಯಾರ್ಥಿಗಳು ಅಭಿನಯಿಸಿದರು.

ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ನಂದಿಧ್ವಜ, ಭೂತಾರಾಧನೆ, ಕೀಲುಕುದುರೆ, ಕೊಡವ ನೃತ್ಯ, ಸೋಮನಕುಣಿತ, ಪಟ್ಟದ ಕುಣಿತ ಹೀಗೆ ವಿವಿಧ ಪ್ರಕಾರಗಳನ್ನು ಅಭಿನಯಿಸಿದರು. 85 ವಿದ್ಯಾರ್ಥಿಗಳು ಏಕ ಕಾಲದಲ್ಲಿ ಅಭಿನಯಿಸುತ್ತಿರುವಾಗ ನೆರೆದಿದ್ದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಅತಿಥಿಗಳು ಎದ್ದು ನಿಂತು ಚಪ್ಪಾಳೆ ಮಳೆಗರೆದರು. ರಾಜ್‌ಗುರು ಹೊಸಕೋಟೆ ಜನಪದ ಕಲಾ ತಂಡದವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT