ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಅಜಕ್ಕಳ ಗಿರೀಶ ಭಟ್, ಎಂ.ಆರ್. ದತ್ತಾತ್ರಿ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

Published 19 ಜೂನ್ 2023, 12:49 IST
Last Updated 19 ಜೂನ್ 2023, 12:49 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ 2022ನೇ ಸಾಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ದಕ್ಷಿಣ ಕನ್ನಡ ಮೂಲದ ಡಾ.ಅಜಕ್ಕಳ ಗಿರೀಶ್ ಭಟ್ ಅವರಿಗೆ ಹಾಗೂ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಎಂ.ಆರ್.ದತ್ತಾತ್ರಿ ಅವರನ್ನು ಆಯ್ಕೆಮಾಡಲಾಗಿದೆ.

ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ನಗದು, ತಾಮ್ರಪತ್ರ ಮತ್ತು ಸನ್ಮಾನ ಒಳಗೊಂಡಿದೆ. ವರ್ಧಮಾನ ಉದಯೋನ್ಮುಖ ಪ್ರಶಸ್ತಿಯು ₹15 ಸಾವಿರ ನಗದು, ತಾಮ್ರಪತ್ರದ ಜೊತೆ ಸನ್ಮಾನ ಒಳಗೊಂಡಿವೆ.

ಮೂಡುಬಿದಿರೆಯಲ್ಲಿ ವರ್ಧಮಾನ ಪ್ರಶಸ್ತಿ ಪೀಠದ ಮಹಾಸಭೆಯು ಪೀಠದ ಅಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಈ ಸಾಲಿನ ತೀರ್ಪುಗಾರರಾದ ವಿಮರ್ಶಕ ಡಾ.ಬಿ.ಜನಾರ್ದನ ಭಟ್, ಪ್ರಾಧ್ಯಾಪಕ ಪ್ರೊ.ಬಿ.ಪಿ.ಸಂಪತ್ ಕುಮಾರ್ ಮತ್ತು ವಿಮರ್ಶಕ ಬೆಳಗೋಡು ರಮೇಶ ಭಟ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ನೀಡಿದ ಶಿಫಾರಸ್ಸಿನ ಆಧಾರದಲ್ಲಿ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ. ಮೂಡುಬಿದಿರೆಯ ಸಮಾಜಮಂದಿರ ಸಭಾ ಸೆಪ್ಟೆಂಬರ್‌ನಲ್ಲಿ ನಡೆಸುವ ದಸರಾ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT