ಕಾರವಾರ: ‘ಸಂವಿಧಾನದ ಮಹತ್ವದ ಸಂದೇಶ ಸಾರುವ ಜೊತೆಗೆ ಸಾಂಸ್ಕೃತಿಕ ಕಲೆಗಳಿಗೆ ಪ್ರೋತ್ಸಾಹ ಒದಗಿಸಲು ಟ್ಯಾಗೋರ್ ಕಡಲತೀರದ ಮಯೂರ ವರ್ಮ ವೇದಿಕೆಯಲ್ಲಿ ಏ.11ರಿಂದ 25ರ ವರೆಗೆ ಕರಾವಳಿ ಭೀಮೋತ್ಸವ ಆಯೋಜಿಸಲಾಗುತ್ತಿದೆ’ ಎಂದು ಉತ್ಸವ ಆಯೋಜಕ ದೀಪಕ ಕುಡಾಳಕರ ತಿಳಿಸಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘15 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ಅಮ್ಯೂಸ್ಮೆಂಟ್, ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಜನರಿಗೆ ರಂಜನೆ ಒದಗಿಸುವುದರ ಜೊತೆಯಲ್ಲಿ ಸಂವಿಧಾನದ ಜಾಗೃತಿ ಮೂಡಿಸಲಿದ್ದೇವೆ’ ಎಂದರು.

‘ಡಾ.ಅಂಬೇಡ್ಕರ್ ಅವರ ಕುರಿತ ರೂಪಕ, ಸಂವಿಧಾನದ ಅರಿವು, ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಮಳಿಗೆ, ಹಲಸು ಮಾವಿನ ಮೇಳ, ಆಲೆ ಮನೆ ಹಬ್ಬ, ಆರೋಗ್ಯ ಶಿಬಿರ ಆಕರ್ಷಣೆಯಾಗಿರಲಿದೆ’ ಎಂದರು.

‘11 ರಂದು ಮಧ್ಯಾಹ್ನ 3 ಗಂಟೆಯಿಂದ ನಗರದಲ್ಲಿ ಮೆರವಣಿಗೆ ನಡೆಯಲಿದೆ. 4.30ಕ್ಕೆ ಮಯೂರವರ್ಮ ವೇದಿಕೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಗಮಿಸುವರು. ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸುವರು’ ಎಂದರು.

ದೇವಾನಂದ ಠಾಣೆಕರ್, ಗಾರು ಮಾಂಗ್ರೆ, ಅಬ್ಬಾಸ್, ರಾಜನ್ ಬಾನಾವಳಿ, ಶ್ರೀಪಾದ ನಾಯ್ಕ, ರೋಹಿದಾಸ ಬಾನಾವಳಿ, ಸಚಿನ್ ಬೋರ್ಕರ್, ರೋಹನ್ ಕುಡಾಳಕರ, ನಾಗರಾಜ ಚಂದಾವರಕರ್, ಮಂಜುನಾಥ ಪೆಡ್ನೇಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-20-337676583

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.