ಪೊಲೀಸರ ಮೇಲೆ ಹಲ್ಲೆ ನಡೆಸಿ, ಸಮವಸ್ತ್ರ ಹರಿದಿದ್ದ ಇಬ್ಬರ ಬಂಧನ

ಶನಿವಾರ, ಮಾರ್ಚ್ 23, 2019
24 °C

ಪೊಲೀಸರ ಮೇಲೆ ಹಲ್ಲೆ ನಡೆಸಿ, ಸಮವಸ್ತ್ರ ಹರಿದಿದ್ದ ಇಬ್ಬರ ಬಂಧನ

Published:
Updated:

ಬೆಂಗಳೂರು: ಪೊಲೀಸರ ಸಮವಸ್ತ್ರ ಹರಿದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರೋಶನ್ ಹಾಗೂ ಕೃಷ್ಣಕುಮಾರ್ ಎಂಬುವರನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಗಳಾದ ಆರೋಪಿಗಳು, ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಮಾ. 9ರಂದು ತಡರಾತ್ರಿ ಪಾನಮತ್ತರಾಗಿ ಚೀರಾಡುತ್ತಿದ್ದರು. ಆ ರೀತಿ ಮಾಡದಂತೆ ಬುದ್ಧಿವಾದ ಹೇಳಿದ್ದಕ್ಕಾಗಿ ಕಾನ್‌ಸ್ಟೆಬಲ್‌ಗಳಿಬ್ಬರ ಸಮವಸ್ತ್ರ ಹಿಡಿದು ಎಳೆದಾಡಿ ಹರಿದಿದ್ದರು. ಹಲ್ಲೆಗೂ ಯತ್ನಿಸಿದ್ದರು’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳ ವರ್ತನೆ ಬಗ್ಗೆ ಸಾರ್ವಜನಿಕರು ನೀಡಿದ್ದ ಮಾಹಿತಿಯಂತೆ ಕಾನ್‌ಸ್ಟೆಬಲ್‌ಗಳಾದ ಸಂಗನಗೌಡ ಹಾಗೂ ಹಮೀದ್, ಸ್ಥಳಕ್ಕೆ ಹೋದಾಗ ಈ ಘಟನೆ ನಡೆದಿತ್ತು. ಸ್ಥಳಕ್ಕೆ ಹೋಗಿದ್ದ ಪಿಎಸ್ಐ ಅವರ ಮಾತನ್ನೂ ಆರೋಪಿಗಳು ಕೇಳಿರಲಿಲ್ಲ.
ಸ್ಥಳಕ್ಕೆ ಹೋದ ಹೆಚ್ಚುವರಿ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

‘ಆರೋಪಿಗಳಿಗೆ ಜಾಮೀನು ಸಿಕ್ಕಿದೆ’ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !