ಆಡಿಯೊ ಪ್ರಕರಣ: ವಿಚಾರಣೆ ಮುಂದೂಡಿಕೆ

ಶನಿವಾರ, ಮಾರ್ಚ್ 23, 2019
24 °C

ಆಡಿಯೊ ಪ್ರಕರಣ: ವಿಚಾರಣೆ ಮುಂದೂಡಿಕೆ

Published:
Updated:

ಬೆಂಗಳೂರು: ಅಪರೇಷನ್ ಕಮಲ ಆರೋಪದ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಪ್ರೀತಂ ಗೌಡ ಹಾಗೂ ಶಿವನಗೌಡ ನಾಯಕ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ‘ಈಗಾಗಲೇ ಕಲಬುರ್ಗಿ ಹೈಕೋರ್ಟ್ ಪೀಠವು ಈ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ‘ ಎಂಬ ಅಂಶವನ್ನು ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರ ಗಮನಕ್ಕೆ ತಂದರು.

‘ಈ ಪ್ರಕರಣದಲ್ಲಿ ನಮ್ಮ ಅರ್ಜಿದಾರರ ಪಾತ್ರ ಏನೂ ಇಲ್ಲ. ಹಾಗಾಗಿ ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, ‘ಈಗಾಗಲೇ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಗೆ ತಡೆ ನೀಡಿರುವಾಗ ನಿರೀಕ್ಷಣಾ ಜಾಮೀನಿನ ಅಗತ್ಯ ಇಲ್ಲ’ ಎಂದು ಪ್ರತಿಪಾದಿಸಿದರು.

ಇದಕ್ಕೆ ಸಿ.ವಿ.ನಾಗೇಶ್, ‘ಹೈಕೋರ್ಟ್ ‌ನೀಡಿರುವುದು ಮಧ್ಯಂತರ ತಡೆ ಮಾತ್ರ. ಒಂದು ವೇಳೆ ಮಧ್ಯಂತರ ತಡೆ ಆದೇಶ ವಜಾ ಆದರೆ ಅರ್ಜಿದಾರರಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಬೇಕು’ ಎಂದು ಮನವಿ ಮಾಡಿದರು. ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !