ನವದೆಹಲಿ: ದೇಶದಲ್ಲಿ ವಾಹನಗಳ ಚಿಲ್ಲರೆ ಮಾರಾಟವು 2024–25ರ ಆರ್ಥಿಕ ವರ್ಷದಲ್ಲಿ ಶೇ 6ರಷ್ಟು ಹೆಚ್ಚಳವಾಗಿದೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್ಎಡಿಎ) ಸೋಮವಾರ ತಿಳಿಸಿದೆ.

2023–24ರ ಆರ್ಥಿಕ ವರ್ಷದಲ್ಲಿ 2.45 ಕೋಟಿ ವಾಹನಗಳು ಮಾರಾಟವಾಗಿದ್ದವು. 2024–25ರ ಇದೇ ಅವಧಿಯಲ್ಲಿ 2.61 ಕೋಟಿ ವಾಹನಗಳು ಮಾರಾಟವಾಗಿದ್ದು, ಶೇ 6ರಷ್ಟು ಏರಿಕೆ ಕಂಡಿದೆ. ನಗರ ಪ್ರದೇಶಕ್ಕಿಂತಲೂ ಗ್ರಾಮೀಣ ಭಾಗದಲ್ಲಿ ಗ್ರಾಹಕರಿಂದ ವಾಹನಗಳಿಗೆ ಬೇಡಿಕೆ ಹೆಚ್ಚಳವಾಗಿದೆ. ಇದರಿಂದ ಮಾರಾಟದ ಪ್ರಮಾಣವು ಏರಿಕೆಯಾಗಿದೆ ಎಂದು ತಿಳಿಸಿದೆ.

ಪ್ರಯಾಣಿಕ ವಾಹನಗಳ ಮಾರಾಟವು ಶೇ 5ರಷ್ಟು ಹೆಚ್ಚಳವಾಗಿದ್ದು, 41.53 ಲಕ್ಷ ವಾಹನಗಳು ಮಾರಾಟವಾಗಿವೆ. ದ್ವಿಚಕ್ರ ವಾಹನಗಳು 1.88 ಕೋಟಿಯಷ್ಟು (ಶೇ 8ರಷ್ಟು ಹೆಚ್ಚಳ) ಮಾರಾಟವಾಗಿವೆ. ಆದರೆ, ವಾಣಿಜ್ಯ ವಾಹನಗಳು ಮತ್ತು ಟ್ರ್ಯಾಕ್ಟರ್ಗಳ ಮಾರಾಟದಲ್ಲಿ ಇಳಿಕೆಯಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.