ಐಷಾರಾಮಿ ಕಾರು ತಯಾರಿಸುವ ಔಡಿ ಕಂಪನಿಯು ತನ್ನ ಜನಪ್ರಿಯ ಸೆಡಾನ್ ಎ4ನ ಹೊಸ ಆವೃತ್ತಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಇದರ ಎಕ್ಸ್ ಷೋರೂಂ ಬೆಲೆ ₹ 42.34 ಲಕ್ಷ ಇದೆ.

ಐದನೇ ಪೀಳಿಗೆಯ ಔಡಿ ಎ4 ಹೊಸ ವಿನ್ಯಾಸ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 190 ಎಚ್‌ಪಿ ಶಕ್ತಿ ಉತ್ಪಾದಿಸಬಲ್ಲದು. ಪ್ರತಿ ಗಂಟೆಗೆ 100 ಕಿ.ಮೀ. ವೇಗ ತಲುಪಲು 7.3 ಸೆಕೆಂಡ್ ತೆಗೆದುಕೊಳ್ಳುತ್ತದೆ. ಗರಿಷ್ಠ ವೇಗ ಗಂಟೆಗೆ 241 ಕಿ.ಮೀ. ಇದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

‘ಉತ್ತಮ ಮಾರಾಟ ಕಂಡಿರುವ ಕಾರಿನ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡುವ ಮೂಲಕ ಹೊಸ ವರ್ಷವನ್ನು ಆರಂಭಿಸುತ್ತಿರುವುದು ಅತ್ಯಂತ ಸಂತೋಷ ತಂದಿದೆ’ ಎಂದು ಔಡಿ ಇಂಡಿಯಾದ ಮುಖ್ಯಸ್ಥ ಬಲ್ಬೀರ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ.

ಮಧ್ಯಮ ಗಾತ್ರದ ಐಷಾರಾಮಿ ಸೆಡಾನ್ ಇತರ ಮಾದರಿಗಳಿಗೆ ಪೈಪೋಟಿ ನೀಡಬಲ್ಲದ್ದಾಗಿದ್ದು, ಈ ವಿಭಾಗದಲ್ಲಿ ‘ಗೇಮ್ ಚೇಂಜರ್’ ಆಗುವ ವಿಶ್ವಾಸವಿದೆ ಎಂದೂ ಹೇಳಿದ್ದಾರೆ.

12ವಿ ಮೈಲ್ಡ್ ಹೈಬ್ರಿಡ್ ಸಿಸ್ಟಂ ಸಹ ಹೊಂದಿದ್ದು, ಇಂಧನ ಬಳಕೆಯನ್ನು ಕಡಿಮೆ ಮಾಡುತ್ತದೆ.

‘2021ರಲ್ಲಿ ಭಾರತದ ಮಾರುಕಟ್ಟೆಗೆ ಔಡಿ ಇ–ಟ್ರಾನ್ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ಘೋಷಣೆ ಮಾಡಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.