ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ್‌ ಕುಮಾರ್‌ ವರದಿ ಪ್ರಶ್ನಿಸಿ ರಿಟ್‌ ಅರ್ಜಿ ಸಲ್ಲಿಕೆ

Last Updated 6 ಮಾರ್ಚ್ 2018, 19:33 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಒದಗಿಸಿದ ಆರೋಪಕ್ಕೆ ಸಂಬಂಧಿಸಿಂತೆ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ ಕುಮಾರ್ ವರದಿಯನ್ನು ಪ್ರಶ್ನಿಸಿ ನಿವೃತ್ತ ಐಪಿಎಸ್‌ ಅಧಿಕಾರಿ ಎಚ್‌.ಎನ್‌.ಸತ್ಯನಾರಾಯಣ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿದಾರ ಸತ್ಯನಾರಾಯಣ ಪರ ವಕೀಲರು, ‘ವಿನಯ್‌ ಕುಮಾರ್ ವರದಿಯಲ್ಲಿ ಸತ್ಯನಾರಾಯಣ ಅವರಿಗೆ ಕ್ಲೀನ್‌ ಚಿಟ್‌ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ವರದಿಗಳೂ ಇವೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲ ವಿ.ಶ್ರೀನಿಧಿ, ‘ಪತ್ರಿಕಾ ವರದಿಗಳು ಕೋರ್ಟ್‌ ಸಾಕ್ಷ್ಯವಾಗುವುದಿಲ್ಲ. ಈಗಾಗಲೇ ಅರ್ಜಿದಾರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಿಸಲಾಗಿದೆ’ ಎಂದರು.

ಇದಕ್ಕೆ ನ್ಯಾಯಪೀಠವು, ‘ಸೂಕ್ತ ದಾಖಲೆಗಳೊಂದಿಗೆ ಬನ್ನಿ’ ಎಂದು ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ ಒಂದು ವಾರ ಕಾಲ ವಿಚಾರಣೆ  ಮುಂದೂಡಿದೆ.

‘ಕಾರಾಗೃಹ ಇಲಾಖೆ ಡಿಜಿಪಿ ಆಗಿದ್ದ ಎಚ್.ಎನ್.ಸತ್ಯನಾರಾಯಣ ರಾವ್ ₹ 2 ಕೋಟಿ ಲಂಚ ಪಡೆದು ಶಶಿಕಲಾಗೆ ವಿಐಪಿ ಸೌಲಭ್ಯ ಒದಗಿಸಿದ್ದಾರೆ’ ಎಂದು ಆರೋಪಿಸಿ ಆಗಿನ ಡಿಐಜಿ ಡಿ.ರೂಪಾ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಇದಕ್ಕೆ ಪೂರಕವಾಗಿ ವಿನಯ್ ಕುಮಾರ್ ಸಮಿತಿ ವರದಿ ಕೊಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT