ಮಂಗಳವಾರ, ಜುಲೈ 5, 2022
24 °C

ಹುಂಡೈ ವರ್ನಾ ಹೊಸ ಅವತರಣಿಗೆ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ತನ್ನ ಮಧ್ಯಮ ಗಾತ್ರದ ಸೆಡಾನ್‌ ವರ್ನಾದ ಹೊಸ ಅವತರಣಿಕೆಯನ್ನು ಬಿಡುಗಡೆ ಮಾಡಿದೆ.

ದೆಹಲಿಯಲ್ಲಿ ಎಕ್ಸ್‌ ಷೋರೂಂ ಬೆಲೆ ₹ 9.3 ಲಕ್ಷದಿಂದ ₹ 15.09 ಲಕ್ಷದವರೆಗಿದೆ.

ಸ್ಪಿರಿಟೆಡ್‌ ನ್ಯೂ ವರ್ನಾ ಎಂದು ಹೆಸರಿಡಲಾಗಿದ್ದು, ಬಿಎಸ್‌–6 ಮಾನದಂಡಕ್ಕೆ ಪೂರಕವಾದ 1.5 ಲೀಟರ್ ಪೆಟ್ರೋಲ್‌ ಮತ್ತು ಡೀಸೆಲ್‌ ಹಾಗೂ ಪೆಟ್ರೋಲ್‌ನ 1 ಲೀಟರ್‌ ಟರ್ಬೊ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಆಟೊಮೆಟಿಕ್‌ ಟ್ರಾನ್ಸ್‌ಮಿಷನ್‌ ಆಯ್ಕೆಯೂ ಇದೆ.

ಹೊಸ ಅವತರಣಿಕೆಯು ಚಾಲಕರಿಗೆ ಹೊಸ ಅನುಭವವನ್ನು ಕಟ್ಟಿಕೊಡಲಿದೆ. ಕಾರ್ಯಕ್ಷಮತೆ, ತಂತ್ರಜ್ಞಾನ ಮತ್ತು ಸುರಕ್ಷತೆಯ ದೃಷ್ಟಿಯಿಂದ ಸೆಡಾನ್ ವಿಭಾಗದಲ್ಲಿ ಹೊಸ ಮೈಲುಗಲ್ಲು ಬರೆಯಲಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎಸ್‌. ಕಿಮ್‌ ತಿಳಿಸಿದ್ದಾರೆ.

ಕೆಲವು ವೈಶಿಷ್ಟ್ಯ

20.32 ಇಂಚು ಟಚ್‌ಸ್ಕ್ರೀನ್‌ ಡಿಸ್‌ಪ್ಲೇ

ವಯರ್‌ಲೆಸ್‌ ಚಾರ್ಜರ್‌

ಎಲೆಕ್ಟ್ರಿಕ್‌ ಸನ್‌ ರೂಫ್‌

ಎಲೆಕ್ಟ್ರಿಕ್‌ ಸ್ಟೆಬಿಲಿಟಿ ಕಂಟ್ರೋಲ್‌

ಹಿಲ್‌ ಸ್ಟಾರ್ಟ್‌ ಅಸಿಸ್ಟ್‌ ಕಂಟ್ರೋಲ್‌

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು