ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾ ಕಂಪನಿಗಳಿಗೆ ದಂಡ: ಚಿಂತನೆ

ಆಯುಷ್ಮಾನ್‌: ಆಸ್ಪತ್ರೆಗಳಿಗೆ ಹಣ ಬಿಡುಗಡೆ ವಿಳಂಬ
Last Updated 16 ಜೂನ್ 2018, 18:42 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್‌ ಭಾರತ ಯೋಜನೆ ಅಡಿಯಲ್ಲಿ ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಲು ವಿಳಂಬ ಮಾಡುವ ವಿಮಾ ಕಂಪನಿಗಳಿಗೆ ದಂಡ ವಿಧಿಸಲು ಕೇಂದ್ರ ಚಿಂತನೆ ನಡೆಸಿದೆ.

ಆಸ್ಪತ್ರೆಗಳ ಹಣ ಬಿಡುಗಡೆ ಕ್ಲೇಮುಗಳ ಇತ್ಯರ್ಥಗೊಳಿಸಲು ವಿಮಾ ಕಂಪನಿಗಳಿಗೆ ಗರಿಷ್ಠ 15 ದಿನಗಳ ಗಡುವು ನೀಡಲಾಗಿದೆ. ಇಲ್ಲದಿದ್ದರೆ ಪಾವತಿಸಬೇಕಾದ ಹಣದ ಶೇಕಡಾ ಒಂದರಷ್ಟು ಬಡ್ಡಿಯನ್ನು ಪ್ರತಿವಾರದ ಲೆಕ್ಕದಲ್ಲಿ ವಿಮಾ ಕಂಪನಿಗಳು ದಂಡ ತೆರಬೇಕಾಗುತ್ತದೆ. ದಂಡದ ಹಣವನ್ನು ನೇರವಾಗಿ ಆಸ್ಪತ್ರೆಗೆ ಪಾವತಿಸಬೇಕಾಗುತ್ತದೆ.

ಈ ಸಂಬಂಧ ಕೇಂದ್ರ ಸರ್ಕಾರ ಮಾದರಿ ಗುತ್ತಿಗೆ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಚಿಕಿತ್ಸೆಗಳ ಪಟ್ಟಿ ಮತ್ತು ಅದಕ್ಕೆ ತಗಲುವ ವೆಚ್ಚ ಸೇರಿದಂತೆ ಅನೇಕ ವಿವರಗಳನ್ನು ಒಳಗೊಂಡಿದೆ. ಯೋಜನೆಯ ಅನುಷ್ಠಾನಕ್ಕೆ 20 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಪ್ಪಿಗೆ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT