ಶುಕ್ರವಾರ, ಆಗಸ್ಟ್ 19, 2022
22 °C

ಟೊಯೊಟ ಅರ್ಬನ್ ಕ್ರೂಸರ್‌ ಹೈರೈಡರ್ ಅನಾವರಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಟೊಯೊಟ ಕಿರ್ಲೋಸ್ಕರ್ ಮೋಟರ್ ಕಂಪನಿಯು ‘ಅರ್ಬನ್ ಕ್ರೂಸರ್ ಹೈರೈಡರ್’ ಅನಾವರಣ ಮಾಡಿದ್ದು, ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಮಾರುಕಟ್ಟೆ ಪ್ರವೇಶಿಸಿದೆ.

ಮುಂಬರುವ ಹಬ್ಬಗಳ ಋತುವಿನಲ್ಲಿ ಈ ವಾಹನವು ಬಿಡುಗಡೆ ಆಗುವ ನಿರೀಕ್ಷೆ ಇದೆ. ಇದು ಹುಂಡೈ ಕ್ರೇಟಾ, ಕಿಯಾ ಸೆಲ್ಟೊಸ್‌ನಂತಹ ವಾಹನಗಳ ಜೊತೆ ಪೈಪೋಟಿಗೆ ಇಳಿಯಲಿದೆ ಎನ್ನಲಾಗಿದೆ.

₹ 25 ಸಾವಿರ ‍ಪಾವತಿಸಿ ಅರ್ಬನ್ ಕ್ರೂಸರ್ ಹೈರೈಡರ್ ವಾಹನ ಬುಕ್ ಮಾಡಬಹುದು ಎಂದು ಕಂಪನಿ ಹೇಳಿದೆ. ಇದು ನಿಯೊ ಡ್ರೈವರ್ ಹಾಗೂ ಸ್ವಯಂ ಚಾರ್ಜ್ ಆಗುವ ಹೈಬ್ರಿಡ್ ಎಲೆಕ್ಟ್ರಿಕ್‌ ಎಂಜಿನ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ನಿಯೊ ಡ್ರೈವ್‌ ಮಾದರಿಯು 1.5 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿರಲಿದೆ. ಸ್ವಯಂ ಚಾರ್ಜ್ ಆಗುವ ಹೈಬ್ರಿಡ್ ಎಲೆಕ್ಟ್ರಿಕ್‌ ಮಾದರಿಯಲ್ಲಿ 1.5 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಇದರಲ್ಲಿದೆ.

ಸನ್‌ರೂಫ್‌, ವೈರ್‌ಲೆಸ್‌ ಚಾರ್ಜರ್, 360 ಡಿಗ್ರಿ ಕ್ಯಾಮೆರಾ, ಆರು ಏರ್‌ಬ್ಯಾಗ್‌ಗಳು ವಾಹನದಲ್ಲಿ ಇರಲಿವೆ ಎಂದು ಕಂಪನಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು