ಶನಿವಾರ, ಜೂನ್ 25, 2022
25 °C

BMW: ಮುಂದಿನ ತಿಂಗಳು ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸೆಡಾನ್ ಐ4 ಭಾರತಕ್ಕೆ ಲಗ್ಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜರ್ಮನಿಯ ಐಷಾರಾಮಿ ಕಾರು ತಯಾರಿಕಾ ಕಂಪನಿ ಬಿಎಂಡಬ್ಲ್ಯು ತನ್ನ ಎಲೆಕ್ಟ್ರಿಕ್ ಸೆಡಾನ್ ಐ4 ಅನ್ನು ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದೆ. ಎಲೆಕ್ಟ್ರಿಕ್ ಕಾರುಗಳು ವಿಭಾಗದಲ್ಲಿ ಬಿಎಂಡಬ್ಲ್ಯು ಗ್ರಾಹಕರ ವಿಶ್ವಾಸ ಗೆಲ್ಲುವುದನ್ನು ಮುಂದುವರೆಸಲಿದೆ ಎಂದು ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಬಿಎಂಡಬ್ಲ್ಯು ಮುಂದಿನ ಆರು ತಿಂಗಳಲ್ಲಿ ಭಾರತದಲ್ಲಿ ಮೂರು ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಅದರಲ್ಲಿ ಎಲೆಕ್ಟ್ರಿಕ್ ಎಸ್‌ಯುವಿ ಐಎಕ್ಸ್ ಹಾಗೂ ಎಲೆಕ್ಟ್ರಿಕ್ ಮಿನಿ ಲಕ್ಸುರಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಎಲೆಕ್ಟ್ರಿಕ್ ಸೆಡಾನ್ ಐ4 ಈಗಾಗಲೇ ಕೆಲ ದೇಶಗಳಲ್ಲಿ ಇದೇ ವರ್ಷದ ಆರಂಭದಲ್ಲಿ ಲಭ್ಯವಾಗಿತ್ತು. ಇದೀಗ ಮೇ 26 ರಿಂದ ಭಾರತದಲ್ಲಿ ಬುಕಿಂಗ್ ಆರಂಭವಾಗಲಿದೆ ಎಂದು ಬಿಎಂಡಬ್ಲ್ಯು ಇಂಡಿಯಾ ಸಮೂಹದ ಸಿಇಒ ವಿಕ್ರಮ್ ಪೌಹಾ ತಿಳಿಸಿದ್ದಾರೆ.

ಭಾರತದಲ್ಲಿ ಬಿಎಂಡಬ್ಲ್ಯುವಿನ ಎಲ್ಲ ಮಾದರಿಯ ಎಲೆಕ್ಟ್ರಿಕ್ ಕಾರುಗಳಿಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪೌಹಾ ತಿಳಿಸಿದ್ದಾರೆ. ನೂತನ ಎಲೆಕ್ಟ್ರಿಕ್ ಸೆಡಾನ್ ಐ4 ಇವಿಗಳಲ್ಲಿ ಕ್ರಾಂತಿ ಮಾಡಲಿದೆ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.

ಎಲೆಕ್ಟ್ರಿಕ್ ಸೆಡಾನ್ ಐ4 ಬಗ್ಗೆ ಇತರೆ ಮಾಹಿತಿಗಳನ್ನು ಕಂಪನಿ ಬಿಟ್ಟುಕೊಟ್ಟಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು