ಬುಧವಾರ, ಅಕ್ಟೋಬರ್ 5, 2022
26 °C

ಎಸ್‌ಯುವಿ ವಿಭಾಗ ಬಲಪಡಿಸಲು ಟಾಟಾ ಮೋಟರ್ಸ್‌ ಯೋಜನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರತಿಸ್ಪರ್ಧಿ ಬ್ರ್ಯಾಂಡ್‌ಗಳಿಂದ ಪೈಪೋಟಿ ಹೆಚ್ಚಾಗುತ್ತಿರುವ ಕಾರಣ ಟಾಟಾ ಮೋಟರ್ಸ್‌ ಕಂಪನಿಯು ಎಸ್‌ಯುವಿ ವಿಭಾಗದಲ್ಲಿ ತನ್ನ ಪ್ರಬಲ ಸ್ಥಾನವನ್ನು ಕಾಯ್ದುಕೊಳ್ಳಲು ಯೋಜನೆ ರೂಪಿಸಿದೆ ಎಂದು ಕಂಪನಿಯ ಪ್ರಯಾಣಿಕ ವಾಹನ ವಿಭಾಗದ ಉಪಾಧ್ಯಕ್ಷ ರಾಜನ್‌ ಅಂಬಾ ತಿಳಿಸಿದ್ದಾರೆ.

ಇದಕ್ಕಾಗಿ ಹಾಲಿ ಇರುವ ಮಾದರಿಗಳ ವಿಸ್ತರಣೆ ಮತ್ತು ಹೊಸ ಮಾದರಿಗಳ ಬಿಡುಗಡೆಗೆ ಕಂಪನಿ ಯೋಜಿಸಿದೆ.

ಟಾಟಾ ಮೋಟರ್ಸ್ ಈಗ ಎಸ್‌ಯುವಿ ವಿಭಾಗದಲ್ಲಿ ಉತ್ತಮ ಮಾರುಕಟ್ಟೆ ಪಾಲು ಹೊಂದಿದ್ದು, ಪಂಚ್‌, ನೆಕ್ಸಾನ್‌, ಹ್ಯಾರಿಯರ್‌ ಮತ್ತು ಸಫಾರಿ ಮಾದರಿಗಳು ಉತ್ತಮ ಮಾರಾಟ ಕಾಣುತ್ತಿವೆ. ಗ್ರಾಹಕರ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಆವೃತ್ತಿಗಳನ್ನು ತರಲು ಯೋಜನೆ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2021–22ರಲ್ಲಿ ಕಂಪನಿಯು 2.22 ಲಕ್ಷ ಎಸ್‌ಯುವಿಗಳನ್ನು ಮಾರಾಟ ಮಾಡಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಅದಕ್ಕಿಂತಲೂ ಹೆಚ್ಚಿನ ಮಾರಾಟ ಪ್ರಗತಿ ಸಾಧಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು