ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋರ್ಡ್‌ನ ಎಲ್ಲ ಮಾದರಿಯ ಕಾರುಗಳ ಬೆಲೆ ಜನವರಿಯಿಂದ ಏರಿಕೆ

Last Updated 10 ಡಿಸೆಂಬರ್ 2020, 13:27 IST
ಅಕ್ಷರ ಗಾತ್ರ

ನವದೆಹಲಿ: ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವ ಕಾರಣ ತನ್ನ ಎಲ್ಲ ಮಾದರಿಯ ಕಾರುಗಳ ಬೆಲೆಯನ್ನು ಜನವರಿ 1ರಿಂದ ಏರಿಕೆ ಮಾಡುವುದಾಗಿ ಫೋರ್ಡ್‌ ಇಂಡಿಯಾ ಕಂಪನಿ ಗುರುವಾರ ತಿಳಿಸಿದೆ.

ಬೆಲೆ ಏರಿಕೆಯು ಶೇಕಡ 1ರಿಂದ ಶೇಕಡ 3ರಷ್ಟರವರೆಗೆ ಇರಲಿದೆ. ಮೌಲ್ಯದ ಲೆಕ್ಕದಲ್ಲಿ ₹ 5 ಸಾವಿರದಿಂದ ₹ 35 ಸಾವಿರದವರೆಗೆ ಇರಲಿದೆ ಎಂದು ಕಂಪನಿಯ ಮಾರುಕಟ್ಟೆ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ವಿನಯ್‌ ರೈನಾ ತಿಳಿಸಿದ್ದಾರೆ.

2020ರಲ್ಲಿ ಬುಕಿಂಗ್‌ ಮಾಡಲಾಗಿರುವ ವಾಹನಗಳ ಬೆಲೆಯಲ್ಲಿ ಏರಿಕೆ ಆಗುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಮಾರುತಿ ಸುಜುಕಿ ಕಂಪನಿ ಸಹ ಜನವರಿಯಿಂದ ಬೆಲೆ ಏರಿಕೆ ಮಾಡುವುದಾಗಿ ಬುಧವಾರ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT