ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಮಾರುಕಟ್ಟೆಯಲ್ಲಿ ಮೈಲಿಗಲ್ಲು ಸ್ಥಾಪಿಸಿದ ಮಾರುತಿ ಸುಜುಕಿ

Last Updated 21 ಜುಲೈ 2021, 10:16 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಗ್ರಾಮೀಣ ಮಾರುಕಟ್ಟೆಯಲ್ಲಿ 50 ಲಕ್ಷಕ್ಕೂ ಅಧಿಕ ವಾಹನಗಳನ್ನು ಮಾರಾಟ ಮಾಡಿದ ಮೈಲಿಗಲ್ಲು ಸಾಧಿಸಿರುವುದಾಗಿ ಮಾರುತಿ ಸುಜುಕಿ ಇಂಡಿಯಾ ಕಂಪನಿ ಬುಧವಾರ ಹೇಳಿದೆ.

ಗ್ರಾಮೀಣ ಭಾಗದಲ್ಲಿ 1,700 ಮಾರಾಟ ಮಳಿಗೆಗಳಿದ್ದು, ಕಂಪನಿಯ ಒಟ್ಟಾರೆ ಮಾರಾಟದಲ್ಲಿ ಸುಮಾರು ಶೇ 40ರಷ್ಟು ಈ ಭಾಗದಿಂದಲೇ ಬರುತ್ತಿದೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ಅವಧಿಯಲ್ಲಿ ಒಟ್ಟಾರೆ ಮಾರಾಟವು 3.53 ಲಕ್ಷದಷ್ಟಾಗಿದೆ. 2020–21ನೇ ಹಣಕಾಸು ವರ್ಷದಲ್ಲಿ ಒಟ್ಟಾರೆ 14.57 ಲಕ್ಷ ವಾಹನಗಳು ಮಾರಾಟ ಆಗಿವೆ.

ಗ್ರಾಹಕರು ಮತ್ತು ಸ್ಥಳೀಯ ವಿತರಕ ಪಾಲುದಾರರ ಬೆಂಬಲದಿಂದ ನಾವು ಈ ಮೈಲಿಗಲ್ಲು ಸಾಧಿಸಿದ್ದೇವೆ ಎಂದು ಘೋಷಿಸಲು ಹೆಮ್ಮೆಪಡುತ್ತೇವೆ ಎಂದು ಕಂಪನಿಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್‌ ಶ್ರೀವಾಸ್ತವ ತಿಳಿಸಿದ್ದಾರೆ.

ಕಂಪನಿಯ ವಹಿವಾಟಿನಲ್ಲಿ ಗ್ರಾಮೀಣ ಮಾರುಕಟ್ಟೆಯು ಬಹಳ ವಿಶೇಷವಾದ ಸ್ಥಾನ ಹೊಂದಿದೆ. ಈ ಮಾರುಕಟ್ಟೆಯ ಅಗತ್ಯಗಳನ್ನು ಬಹಳ ಎಚ್ಚರಿಕೆಯಿಂದ ಅಧ್ಯಯನ ಮಾಡುತ್ತಿದ್ದೇವೆ. ಗ್ರಾಮೀಣ ಭಾರತದ ಗ್ರಾಹಕರ ಅಗತ್ಯಗಳಿಗೆ ಸರಿಹೊಂದುವ ಉತ್ಪನ್ನಗಳು ಮತ್ತು ಸೇವೆಗಳನ್ನು ತಲುಪಿಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಗ್ರಾಮೀಣ ಭಾಗದ ಗ್ರಾಹಕರಿಗೆ ಅನುಕೂ ಮಾಡಿಕೊಡುವ ಉದ್ದೇಶದಿಂದ 235 ‘ಸರ್ವೀಸ್‌ ಆನ್‌ ವೀಲ್ಸ್‌’ ಅನ್ನೂ ಒಳಗೊಂಡು 4 ಸಾವಿರಕ್ಕೂ ಅಧಿಕ ಸೇವಾ ಕೇಂದ್ರಗಳಿವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT