ಬುಧವಾರ, ಸೆಪ್ಟೆಂಬರ್ 30, 2020
20 °C

ಪೆಟ್ರೋಲ್‌ ಎಂಜಿನ್‌ನಲ್ಲಿ ಮಾರುತಿ ಎಸ್‌–ಕ್ರಾಸ್‌

ಪಿಟಿಐ Updated:

ಅಕ್ಷರ ಗಾತ್ರ : | |

maruti suzuki

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ತನ್ನ ಎಸ್‌–ಕ್ರಾಸ್‌ ಕಾರಿನ ಪೆಟ್ರೋಲ್‌ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ಇದರ ಎಕ್ಸ್‌ ಷೋರೂಂ ಬೆಲೆ ₹ 8.39 ಲಕ್ಷದಿಂದ ₹ 12.39 ಲಕ್ಷದವರೆಗಿದೆ.

ಈ ಹಿಂದೆ ಡೀಸೆಲ್ ಎಂಜಿನ್‌ ಆಯ್ಕೆಯಲ್ಲಿ ಮಾತ್ರವೇ ಎಸ್‌–ಕ್ರಾಸ್ ಬಿಡುಗಡೆ ಮಾಡಲಾಗಿತ್ತು. ಇದೀಗ 1.5 ಲೀಟರಿನ ಪೆಟ್ರೋಲ್ ಎಂಜಿನ್ ಅವತರಣಿಕೆಯು‌ ಮ್ಯಾನುಯಲ್‌ ಮತ್ತು ಆಟೊಮ್ಯಾಟಿಕ್‌ ಗಿಯರ್‌ ಆಯ್ಕೆಗಳಲ್ಲಿ ಲಭ್ಯವಿದೆ.

‘ಕಂಪನಿ ನಡೆಸಿದ ಸಮೀಕ್ಷೆಯ ಪ್ರಕಾರ, ಆಟೊಮಿಟಿಕ್‌ ಟ್ರಾನ್ಸ್‌ಮಿಷನ್‌ಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಹೊಸ ಎಸ್‌–ಕ್ರಾಸ್‌ನಲ್ಲಿ ಈ ಆಯ್ಕೆಯನ್ನು ನೀಡಲಾಗಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆನೆಚಿ ಅಯುಕವಾ ತಿಳಿಸಿದ್ದಾರೆ.

‘ಯುಟಿಲಿಟಿ ವಾಹನ ವಿಭಾಗದಲ್ಲಿ ಕಂಪನಿಯ ಮಾರುಕಟ್ಟೆ ಪಾಲು ಹೆಚ್ಚಿಸಿಕೊಳ್ಳಲು ಪೆಟ್ರೋಲ್‌ ಎಂಜಿನ್‌ನ ಎಸ್‌–ಕ್ರಾಸ್‌ ನೆರವಾಗಲಿದೆ’ ಎಂದು ಕಂಪನಿಯ  ಮಾರುಕಟ್ಟೆ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್‌ ಶ್ರೀವಾಸ್ತವ ಅವರು ಅಭಿಪ್ರಾಯಪ‍ಟ್ಟಿದ್ದಾರೆ.

ಸೆನ್ಸಿಂಗ್‌ ವೈಪರ್ಸ್‌, ಆಟೊ ಹೆಡ್‌ಲ್ಯಾಂಪ್ಸ್‌ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ ಮತ್ತು ಕ್ಯಾಮೆರಾದಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು