ಮಾರುತಿ ಸುಜುಕಿ ಇಂಡಿಯಾ ಕಂಪನಿಯ ಲಾಭ ಎರಡು ಪಟ್ಟು ಹೆಚ್ಚಳ

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ಎರಡುಪಟ್ಟು ಹೆಚ್ಚಾಗಿದ್ದು, ₹ 1,036 ಕೋಟಿಗೆ ಏರಿಕೆ ಆಗಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 475 ಕೋಟಿ ನಿವ್ವಳ ಲಾಭ ಗಳಿಸಿತ್ತು. ನಿವ್ವಳ ಮಾರಾಟ ಮೌಲ್ಯ ₹ 17,776 ಕೋಟಿಯಿಂದ ₹ 26,512 ಕೋಟಿಗೆ ಏರಿಕೆ ಆಗಿದೆ.
ಕಳೆದ ವರ್ಷದ ಮೊದಲ ತ್ರೈಮಾಸಿಕದ ಫಲಿತಾಂಶವು ಕೋವಿಡ್ ಸಂಬಂಧಿತ ಲಾಕ್ಡೌನ್ ಪರಿಣಾಮಕ್ಕೆ ಒಳಗಾಗಿತ್ತು. ಹೀಗಾಗಿ, ಈ ವರ್ಷದ ಮೊದಲ ತ್ರೈಮಾಸಿಕದ ಜೊತೆ ಹೋಲಿಕೆ ಮಾಡುವುದು ಅಷ್ಟು ಸರಿ ಹೋಗುವುದಿಲ್ಲ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ತ್ರೈಮಾಸಿಕದಲ್ಲಿ 4.67 ಲಕ್ಷ ವಾಹನಗಳನ್ನು ಮಾರಾಟ ಮಾಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 3.53 ಲಕ್ಷ ವಾಹನಗಳನ್ನು ಮಾರಾಟ ಮಾಡಿತ್ತು.
ಸರಕುಗಳ ದರವು ಹೆಚ್ಚಾಗುತ್ತಿರುವುದರಿಂದ ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಕಾರ್ಯಾಚರಣೆ ಲಾಭದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ತಯಾರಿಕಾ ವೆಚ್ಚ ಸರಿದೂಗಿಸಿಕೊಳ್ಳಲು ವಾಹನಗಳ ದರವನ್ನು ಭಾಗಶಃ ಹೆಚ್ಚಿಸುವಂತಾಗಿದೆ ಎಂದು ಕಂಪನಿಯು ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.