ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಟ್ರಿಕ್‌ ವಾಹನ ವಹಿವಾಟಿನ ಮೇಲೆ ಹೊಸದಾಗಿ ₹ 3 ಸಾವಿರ ಕೋಟಿ ಹೂಡಿಕೆ: ಮಹೀಂದ್ರ

Last Updated 11 ಏಪ್ರಿಲ್ 2021, 15:53 IST
ಅಕ್ಷರ ಗಾತ್ರ

ನವದೆಹಲಿ: ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯು ತನ್ನ ವಿದ್ಯುತ್ ಚಾಲಿತ ವಾಹನ (ಇ.ವಿ.) ವಹಿವಾಟಿನ ಮೇಲೆ ಮುಂದಿನ ಮೂರು ವರ್ಷಗಳಲ್ಲಿ ಹೊಸದಾಗಿ ₹ 3 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅನಿಶ್‌ ಶಾ ತಿಳಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ₹ 9 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಕಂಪನಿಯು ಈಗಾಗಲೇ ಘೋಷಿಸಿದೆ. ಇದಲ್ಲದೆ ಹೊಸದಾಗಿ ₹ 3 ಸಾವಿರ ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ. ಇದಕ್ಕೆ ಪೂರಕವಾಗಿ ಹೆಚ್ಚಿನ ಮೈತ್ರಿ ಮತ್ತು ಪಾಲುದಾರಿಕೆಗಳನ್ನು ಮಾಡಿಕೊಳ್ಳಲು ಕಂಪನಿ ಆಲೋಚಿಸುತ್ತಿದೆ.

ಕಂಪನಿಯು 2025ರ ವೇಳೆಗೆ 5 ಲಕ್ಷ ವಿದ್ಯುತ್ ಚಾಲಿತ ವಾಹನಗಳನ್ನು ಭಾರತದ ರಸ್ತೆಗಳಿಗೆ ಇಳಿಸುವ ಗುರಿ ಇಟ್ಟುಕೊಂಡಿದೆ. ಭಾರತದಲ್ಲಿ ತನ್ನ ‘ಇವಿ’ ವಹಿವಾಟಿಗಾಗಿಈಗಾಗಲೇ ₹ 1,700 ಕೋಟಿ ಹೂಡಿಕೆ ಮಾಡಿದ್ದು, ಹೊಸ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ₹ 500 ಕೋಟಿ ಹೂಡಿಕೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT