ಭಾನುವಾರ, ಜನವರಿ 24, 2021
19 °C

ಪ್ರಯಾಣಿಕ ವಾಹನ ರಿಟೇಲ್‌ ಮಾರಾಟ ಶೇ 4ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೀಪಾವಳಿ–ಧನ್‌ತೇರಸ್‌ ಕಾರಣದಿಂದ ನವೆಂಬರ್‌ನಲ್ಲಿ ಪ್ರಯಾಣಿಕ ವಾಹನಗಳ ರಿಟೇಲ್‌ ಮಾರಾಟವು ಶೇಕಡ 4.17ರಷ್ಟು ಹೆಚ್ಚಾಗಿದೆ ಎಂದು ಭಾರತೀಯ ವಾಹನ ವಿತರಕರ ಒಕ್ಕೂಟ (ಎಫ್‌ಎಡಿಎ) ಹೇಳಿದೆ.

2019ರ ನವೆಂಬರ್‌ನಲ್ಲಿ 2.79 ಲಕ್ಷ ವಾಹನಗಳು ಮಾರಾಟ ಆಗಿದ್ದವು. 2020ರ ನವೆಂಬರ್‌ನಲ್ಲಿ 2.91 ಲಕ್ಷ ವಾಹನಗಳು ಮಾರಾಟವಾಗಿವೆ.

ದ್ವಿಚಕ್ರ ವಾಹನಗಳ ಮಾರಾಟ 17.98 ಲಕ್ಷದಿಂದ ₹ 14.13 ಲಕ್ಷಕ್ಕೆ, ಅಂದರೆ ಶೇ 21.4ರಷ್ಟು, ಇಳಿಕೆ ಆಗಿದೆ. ವಾಣಿಜ್ಯ ವಾಹನಗಳ ಮಾರಾಟ ಶೇ 31ರಷ್ಟು, ತ್ರಿಚಕ್ರ ವಾಹನಗಳ ಮಾರಾಟ ಶೇ 65ರಷ್ಟು ಕಡಿಮೆಯಾಗಿದೆ.

ಟ್ರ್ಯಾಕ್ಟರ್‌ ಮಾರಾಟ ಶೇ 8.47ರಷ್ಟು ಹೆಚ್ಚಾಗಿದೆ. ಎಲ್ಲಾ ಮಾದರಿಗಳನ್ನು ಒಳಗೊಂಡು ಒಟ್ಟಾರೆ ಮಾರಾಟವು ಶೇ 19ರಷ್ಟು ಇಳಿಕೆಯಾಗಿದೆ.

ಪ್ರಯಾಣಿಕ ವಾಹನ ವಿಭಾಗದಲ್ಲಿ ಹೊಸದಾಗಿ ಬಿಡುಗಡೆ ಆಗಿರುವ ಕಾಂಪ್ಯಾಕ್ಟ್‌ ಎಸ್‌ಯುವಿಗಳಿಗೆ ಉತ್ತಮ ಬೇಡಿಕೆ ಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು