ಮಂಗಳವಾರ, ಮಾರ್ಚ್ 21, 2023
23 °C

ಪ್ರಯಾಣಿಕ ವಾಹನ ಮಾರಾಟದಲ್ಲಿ ದಾಖಲೆ: ಟಾಟಾ ಅಂದಾಜು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದಲ್ಲಿ 38 ಲಕ್ಷ ಪ್ರಯಾಣಿಕ ವಾಹನಗಳ ಮಾರಾಟ ಆಗಬಹುದು ಎಂದು ಟಾಟಾ ಮೋಟರ್ಸ್‌ನ ‍ಪ್ರಯಾಣಿಕ ವಾಹನ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಶೈಲೇಶ್‌ ಚಂದ್ರ ಅಂದಾಜಿಸಿದ್ದಾರೆ.

ಆದರೆ, ಮುಂದಿನ ಹಣಕಾಸು ವರ್ಷದಲ್ಲಿ ಈ ಪ್ರಮಾಣದ ಮಾರಾಟ ಕಾಣಲಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ. ಈ ಹಣಕಾಸು ವರ್ಷದಲ್ಲಿ ಅತಿಹೆಚ್ಚಿನ ಸಂಖ್ಯೆಯ ಪ್ರಯಾಣಿಕ ವಾಹನ ಮಾರಾಟ ದಾಖಲಾಗಬಹುದು ಎಂದಿದ್ದಾರೆ.

ಭಾರತೀಯ ಆಟೊಮೊಬೈಲ್ ತಯಾರಕರ ಸಂಘದ (ಎಸ್‌ಐಎಎಂ) ಮಾಹಿತಿ ಪ್ರಕಾರ, 2021–22ರಲ್ಲಿ ದೇಶದಲ್ಲಿ 30.69 ಲಕ್ಷ ಪ್ರಯಾಣಿಕ ವಾಹನಗಳ ಮಾರಾಟ ಆಗಿದೆ. 2018–19ರಲ್ಲಿ ಒಟ್ಟು 33.77 ಲಕ್ಷ ಪ್ರಯಾಣಿಕ ವಾಹನಗಳ ಮಾರಾಟ ಆಗಿದ್ದು ಇದುವರೆಗಿನ ದಾಖಲೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು