ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್‌ಗೆ FasTag ಆಧಾರಿತ ಪೇಮೆಂಟ್‌ ವ್ಯವಸ್ಥೆ: Paytm

ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಸೌಲಭ್ಯ
Published 16 ಜನವರಿ 2024, 15:44 IST
Last Updated 16 ಜನವರಿ 2024, 15:44 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಗೆ ಫಾಸ್ಟ್ಯಾಗ್ ಆಧಾರಿತ ಡಿಜಿಟಲ್ ಪೇಮೆಂಟ್‌ ವ್ಯವಸ್ಥೆಯನ್ನು ಪೇಟಿಎಂ (Paytm) ಜಾರಿಗೊಳಿಸಿದೆ.

ಇದಕ್ಕಾಗಿ Olympia Group ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಂಗಳವಾರ ತಿಳಿಸಿದೆ.

ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ RFID ಆಧಾರಿತ ಫಾಸ್ಟ್ಯಾಗ್ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಈ ಮೂಲಕ ಪಾರ್ಕಿಂಗ್ ಶುಲ್ಕವನ್ನು ವಿಧಿಸಲಾಗುತ್ತದೆ. ಇದರಿಂದ ಬಳಕೆದಾರರಿಗೆ ಸಮಯ ಉಳಿಯುವುದಲ್ಲದೇ ಡಿಜಿಟಲ್ ಇಂಡಿಯಾ ಆಶಯವನ್ನು ಉತ್ತೇಜಿಸಲಾಗುತ್ತದೆ ಎಂದು ತಿಳಿಸಿದೆ.

ಈಗಾಗಲೇ ಪುಣೆ, ಡೆಹರಾಡೂನ್ ಹಾಗೂ ಇಂದೋರ್‌ ವಿಮಾನ ನಿಲ್ದಾಣಗಳಿಗೆ ಈ ಸೌಲಭ್ಯವನ್ನು ಒದಗಿಸಿಕೊಡಲಾಗಿದೆ ಎಂದು ತಿಳಿಸಿದೆ.

ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ವಾಲೆಟ್ ಅನ್ನು ಈ ವ್ಯವಸ್ಥೆ ಬೆಂಬಲಿಸುತ್ತದೆ. ಫಾಸ್ಟ್ಯಾಗ್ ಗಾಗಿ ಈಗಾಗಲೇ 1.8 ಕೋಟಿಗೂ ಅಧಿಕ ಬಳಕೆದಾರರು ಪೇಟಿಎಂ ಅನ್ನು ಬಳಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT