ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2025ರೊಳಗೆ 10 ಹೊಸ ಇ.ವಿ.: ಟಾಟಾ ಮೋಟರ್ಸ್‌

Last Updated 28 ಜೂನ್ 2021, 16:10 IST
ಅಕ್ಷರ ಗಾತ್ರ

ನವದೆಹಲಿ: 2025ರೊಳಗೆ ಒಟ್ಟು 10 ವಿದ್ಯುತ್ ಚಾಲಿತ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಆಲೋಚನೆಯನ್ನು ಟಾಟಾ ಮೋಟರ್ಸ್‌ ಹೊಂದಿದೆ ಎಂದುಕಂಪನಿ ಅಧ್ಯಕ್ಷ ಎನ್‌. ಚಂದ್ರಶೇಖರನ್‌ ತಿಳಿಸಿದ್ದಾರೆ.

ವಾಹನಗಳ ತಯಾರಿಕೆಯಲ್ಲಿ ಸುಸ್ಥಿರ ಮಾದರಿಗಳನ್ನು ಅನುಸರಿಸುವ ವಿಶ್ವದ ಪ್ರಮುಖ ಕಂಪನಿಗಳಲ್ಲಿ ಒಂದಾಗುವ ಗುರಿಯನ್ನು ಕಂಪನಿಯ ಹೊಂದಿದ್ದು, ಇದರ ಭಾಗವಾಗಿ ಸೆಲ್‌ ಮತ್ತು ಬ್ಯಾಟರಿ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳನ್ನು ಅರಸುತ್ತಿದೆ ಎಂದು 2020–21ರ ಕಂಪನಿಯ ವಾರ್ಷಿಕ ವರದಿಯಲ್ಲಿ ಅವರು ಷೇರುದಾರರಿಗೆ ತಿಳಿಸಿದ್ದಾರೆ.

‘ಟಾಟಾ ಮೋಟರ್ಸ್‌ ಭಾರತದ ಮಾರುಕಟ್ಟೆಯಲ್ಲಿ ಆಗಲಿರುವ ಬದಲಾವಣೆಯಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ. 2025ರ ಒಳಗಾಗಿ 10 ಹೊಸ ವಿದ್ಯುತ್‌ ಚಾಲಿತ ವಾಹನಗಳನ್ನು ಹೊಂದಲಿದೆ. ಒಂದು ಸಮೂಹವಾಗಿ ನಾವು ದೇಶದಾದ್ಯಂತ ಚಾರ್ಜಿಂಗ್‌ ಮೂಲಸೌಕರ್ಯಕ್ಕಾಗಿ ಹೂಡಿಕೆ ಮಾಡುತ್ತೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT