ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಫೆಬ್ರುವರಿಯಿಂದ ಟಾಟಾ ಪ್ರಯಾಣಿಕ ವಾಹನ ಬೆಲೆ ಹೆಚ್ಚಳ

Last Updated 27 ಜನವರಿ 2023, 18:28 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಮೋಟರ್ಸ್ ಕಂಪನಿಯು ಫೆಬ್ರುವರಿ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಪ್ರಯಾಣಿಕ ವಾಹನಗಳ ಬೆಲೆಯನ್ನು ಸರಾಸರಿ ಶೇಕಡ 1.2ರಷ್ಟು ಹೆಚ್ಚಿಸುವುದಾಗಿ ಶುಕ್ರವಾರ ಹೇಳಿದೆ.

ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದರ ಜೊತೆಗೆ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2023ರ ಏಪ್ರಿಲ್‌ನಿಂದ ಜಾರಿಗೆ ಬರಲಿರುವ ಕಠಿಣ ನಿಯಮಗಳನ್ನು ಪಾಲನೆ ಮಾಡಬೇಕಿರುವ ಕಾರಣದಿಂದಾಗಿ ಒಟ್ಟು ವೆಚ್ಚ ಹೆಚ್ಚಳದಲ್ಲಿ ಕೆಲವಷ್ಟನ್ನು ಬೆಲೆ ಏರಿಕೆಯ ಮೂಲಕ ಗ್ರಾಹಕರಿಗೆ ವರ್ಗಾಯಿಸಲಾಗುವುದು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT