ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಟಾ ವಾಣಿಜ್ಯ ವಾಹನ ಬೆಲೆ ಏರಿಕೆ

Last Updated 22 ಮಾರ್ಚ್ 2022, 10:31 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಟಾಟಾ ಮೋಟರ್ಸ್ ಕಂಪನಿಯು ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಶೇಕಡ 2ರಿಂದ ಶೇ 2.5ರವರೆಗೆ ಹೆಚ್ಚಿಸಲಿದೆ. ವಾಹನದ ಮಾದರಿ ಆಧರಿಸಿ ಬೆಲೆ ಹೆಚ್ಚಳದ ಪ್ರಮಾಣ ನಿರ್ಧಾರವಾಗಲಿದೆ ಎಂದು ಕಂಪನಿ ಮಂಗಳವಾರ ತಿಳಿಸಿದೆ.

ಉಕ್ಕು, ಅಲ್ಯುಮಿನಿಯಂ ಮತ್ತು ಇತರ ಲೋಹಗಳ ಬೆಲೆಯಲ್ಲಿ ಹೆಚ್ಚಳ ಆಗಿರುವ ಕಾರಣ ವಾಣಿಜ್ಯ ವಾಹನಗಳ ಬೆಲೆಯನ್ನೂ ಹೆಚ್ಚಿಸಬೇಕಾಗಿದೆ ಎಂದು ಕಂಪನಿಯು ಷೇರು ಮಾರುಕಟ್ಟೆಗೆ ತಿಳಿಸಿದೆ.

ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಎಲ್ಲ ಮಾದರಿಯ ವಾಹನಗಳ ಬೆಲೆಯನ್ನು ಶೇ 3ರಷ್ಟು ಹೆಚ್ಚಿಸುವುದಾಗಿ ಮರ್ಸಿಡೀಸ್ ಬೆಂಜ್ ಕಂಪನಿಯು ಕಳೆದ ವಾರ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT