ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಟಾ ಪವರ್‌ ಚಾರ್ಜಿಂಗ್‌ ಕೇಂದ್ರ

Last Updated 19 ಫೆಬ್ರುವರಿ 2020, 15:29 IST
ಅಕ್ಷರ ಗಾತ್ರ

ದೇಶದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಬಳಕೆಗೆ ಚಾರ್ಜಿಂಗ್‌ ಕೇಂದ್ರಗಳು ಸಮರ್ಪಕವಾಗಿ ಇಲ್ಲದಿರುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ವಾಹನ ತಯಾರಿಕಾ ಕಂಪನಿಗಳು, ಕೇಂದ್ರ ಸರ್ಕಾರ ಹಂತ ಹಂತವಾಗಿ ಚಾರ್ಜಿಂಗ್‌ ಕೇಂದ್ರಗಳನ್ನು ತೆರೆಯಲು ಆರಂಭಿಸಿವೆ.

ಟಾಟಾ ಪವರ್‌ ಕಂಪನಿಯು ತನ್ನ ವಿದ್ಯುತ್‌ ಚಾಲಿತ ಚಾರ್ಜಿಂಗ್‌ ನೆಟ್‌ವರ್ಕ್‌ ವಿಸ್ತರಿಸಿಕೊಳ್ಳಲು ಮುಂದಾಗಿದೆ.2021ರ ಒಳಗಾಗಿ ದೇಶದಾದ್ಯಂತ 700 ಚಾರ್ಜಿಂಗ್‌ ಕೇಂದ್ರಗಳನ್ನು ತೆರೆಯಲಿದೆ.

ದೆಹಲಿ, ಮುಂಬೈ, ಬೆಂಗಳೂರು, ಪುಣೆ, ಹೈದರಾಬಾದ್‌ ಸೇರಿದಂತೆ ಇನ್ನೂ ಹಲವು ನಗರಗಳಲ್ಲಿ ವೇಗವಾಗಿ ಚಾರ್ಜ್‌ ಆಗುವಂತಹ 100 ಕೇಂದ್ರಗಳನ್ನು ಸ್ಥಾಪಿಸಿದೆ. 2020ರ ಮಾರ್ಚ್‌ ಒಳಗಾಗಿ ಒಟ್ಟಾರೆ 300 ಕೇಂದ್ರಗಳನ್ನು ನಿರ್ಮಿಸುವುದಾಗಿ ಹೇಳಿದೆ.

‘ಯಾವ ನಗರಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳನ್ನು ಬಿಡುಗಡೆ ಮಾಡಲಾಗುತ್ತಿದೆಯೋ ಅಂತಹ ಕಡೆಗಳಲ್ಲಿ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 2021ರ ಒಳಗಾಗಿ ಒಟ್ಟಾರೆ 700 ಕೇಂದ್ರಗಳನ್ನು ಸ್ಥಾಪಿಸುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಪ್ರವೀರ್‌ ಸಿನ್ಹಾ ಮಾಹಿತಿ ನೀಡಿದ್ದಾರೆ. ಇವಿಗಳ ಮೇಲಿನ ಜಿಎಸ್‌ಟಿಯನ್ನು ಶೇ 12 ರಿಂದ ಶೇ 5ಕ್ಕೆ ತಗ್ಗಿಸುವ ಕೇಂದ್ರದ ನಿರ್ಧಾರದಿಂದ ಗ್ರಾಹಕರಿಗೆ ಕಡಿಮೆ ಬೆಲೆಗೆ ವಿದ್ಯುತ್‌ ಚಾಲಿತ ವಾಹನಗಳು ಲಭ್ಯವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಅಷ್ಟೇ ಅಲ್ಲದೆ, ಮನೆಗಳಲ್ಲಿಯೂ ಚಾರ್ಜಿಂಗ್‌ ಸೌಲಭ್ಯ ಒದಗಿಸುವ ಬಗ್ಗೆ ಗಮನ ನೀಡಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆಟ್ರೊ ನಿಲ್ದಾಣಗಳು, ಶಾಪಿಂಗ್‌ ಮಾಲ್‌ಗಳು, ಚಾರ್ಜಿಂಗ್‌ ಮೂಲಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT