ನವದೆಹಲಿ: ‘ದ್ವಿಚಕ್ರ ವಾಹನಗಳು ಐಷಾರಾಮಿ ಸರಕುಗಳ ಅಥವಾ ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನಗಳ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೆರಿಗೆ ದರ ಪರಿಷ್ಕರಣೆಯನ್ನು ಪರಿಗಣಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೆರಿಗೆ ದರ ಪರಿಷ್ಕರಿಸುವ ಪ್ರಸ್ತಾವನೆಯನ್ನು ಜಿಎಸ್‌ಟಿ ಮಂಡಳಿಯ ಮುಂದಿಡುವುದಾಗಿ ತಿಳಿಸಿದ್ದಾರೆ ಎಂದು ಸಿಐಐ ಮತ್ತು ಹಣಕಾಸು ಸಚಿವಾಲಯದ ವಕ್ತಾರರು ಹೊರಡಿಸಿರುವ ಪ್ರಕಟಣೆಗಳಲ್ಲಿ ತಿಳಿಸಲಾಗಿದೆ.

ಸದ್ಯ ದ್ವಿಚಕ್ರವಾಹನಗಳಿಗೆ ಶೇಕಡ 28ರ ಗರಿಷ್ಠ ತೆರಿಗೆ ದರ ಇದೆ. ಇದನ್ನು ತಗ್ಗಿಸುವ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಇದೊಂದು ಉತ್ತಮ ಸಲಹೆ. ಇದನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ’ ಎಂದೂ ಸಿಐಐ ತಿಳಿಸಿದೆ.

150 ಸಿಸಿ ವರೆಗಿನ ಬೈಕ್‌ಗಳ ಮೇಲಿನ ಜಿಎಸ್‌ಟಿಯನ್ನು ಶೇ 18ರ ತೆರಿಗೆ ವ್ಯಾಪ್ತಿಗೆ ತರುವಂತೆ ಹೀರೊ ಮೊಟೊಕಾರ್ಪ್ ಕಂಪನಿಯು ಕಳೆದ ವರ್ಷ ಸರ್ಕಾರಕ್ಕೆ ಮನವಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.