ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಬಿ.ಎಲ್.ಡಿ.ಇ.ಯ ಜೆರಿಯಾಟ್ರಿಕ್ ಕ್ಲಿನಿಕ್‌ಗೆ ಪ್ರಶಂಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜೆರಿಯಾಟ್ರಿಕ್ (ವೃದ್ಧಾಪ್ಯ) ರಾಷ್ಟ್ರೀಯ ಸಮಾವೇಶ ಈಚೆಗೆ ನವದೆಹಲಿಯಲ್ಲಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆ ಮತ್ತು ಜೆರಿಯಾಟ್ರಿಕ್ ಸಂಸ್ಥೆಯ ಸಹಯೋಗದೊಂದಿಗೆ ನಡೆಯಿತು.

ಈ ರಾಷ್ಟ್ರೀಯ ಸಮಾವೇಶದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ ಕ್ಲಿನಿಕ್ 2018ರ ವರ್ಷದಲ್ಲಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮಗಳು, ಉಚಿತ ಆರೋಗ್ಯ ಶಿಬಿರ, ಲಸಿಕಾ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಹಿರಿಯರ ಆರೋಗ್ಯಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ದೆಹಲಿ ಸಂತೋಷ ವಿ.ವಿ. ಉಪ ಕುಲಪತಿ ಡಾ.ವಿ.ಕೆ.ಅರೋರಾ ಪ್ರಶಸ್ತಿಯನ್ನು, ಬಿ.ಎಲ್.ಡಿ.ಇ ಜೆರಿಯಾಟ್ರಿಕ್ ಕ್ಲಿನಿಕ್‌ನ ಡಾ.ಆನಂದ ಪಿ.ಅಂಬಲಿ ಅವರಿಗೆ ವಿತರಿಸಿದರು.

ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯರು, ಜೆರಿಯಾಟ್ರಿಕ್ ಸೊಸೈಟಿ ಆಫ್ ಇಂಡಿಯಾ ಅಧ್ಯಕ್ಷ ಡಾ.ವಿವೇಕ ಹಂಡಾ, ಕಾರ್ಯದರ್ಶಿ ಡಾ.ಒ.ಪಿ.ಶರ್ಮಾ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.