ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕನಿಗೆ ‘ಪರೋಪಕಾರಿ ಪ್ರಶಸ್ತಿ’

7

ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕನಿಗೆ ‘ಪರೋಪಕಾರಿ ಪ್ರಶಸ್ತಿ’

Published:
Updated:

ಬೆಂಗಳೂರು: ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರಿಗೆ ‘ಹಾಸ್‌ಮ್ಯಾಟ್‌ ಪರೋಪಕಾರಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಹಾಸ್‌ಮ್ಯಾಟ್‌ ಆಸ್ಪತ್ರೆಯ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಅಧ್ಯಕ್ಷ ಥಾಮಸ್‌ ಚಾಂಡಿ, ಚಾಲಕ ವೈ.ಎನ್‌.ಗಂಗಾಧರ್‌ ಮತ್ತು ನಿರ್ವಾಹಕ ಟಿ.ಶ್ರೀನಿವಾಸ್‌ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ತಲಾ ₹10,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಯಲಹಂಕ–ನೆಲಮಂಗಲ ಮಾರ್ಗದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ವೊಬ್ಬರು ಆಯತಪ್ಪಿ ದ್ವಿಚಕ್ರದಿಂದ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಅವರನ್ನು ಚಾಲಕ ಮತ್ತು ನಿರ್ವಾಹಕರು ಆಸ್ಪತ್ರೆಗೆ ಸೇರಿಸಿದ್ದರು.

 

ಬರಹ ಇಷ್ಟವಾಯಿತೆ?

 • 15

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !