ಮಂಗಳವಾರ, ಜೂಲೈ 7, 2020
27 °C

ಬಂಡೀಪುರ: ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಕಾಳ್ಗಿಚ್ಚಿನಿಂದಾಗಿ ಹಾನಿಗೀಡಾದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಗೋಪಾಲಸ್ವಾಮಿ ಬೆಟ್ಟ ವಲಯದ ಕರಡಿಕಲ್ಲುಬೆಟ್ಟ, ಗುಮ್ಮನಗುಡ್ಡ ಮತ್ತು ಬೋಳಗುಡ್ಡ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಬಂದ ಮುಖ್ಯಮಂತ್ರಿ ಅವರು ಗುಂಡ್ಲುಪೇಟೆಯಲ್ಲಿ ಇಳಿಯಲಿಲ್ಲ. ಅರಣ್ಯ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಂಡ್ಯಕ್ಕೆ ತೆರಳಿದರು.

‘ಮುಖ್ಯಮಂತ್ರಿ ಅವರು ಸಮೀಕ್ಷೆ ನಡೆಸಿ ಹೋಗಿದ್ದಾರೆ. ಯಾವುದೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.

ಕಾಣದ ಬೆಂಕಿ: ಬುಧವಾರ ರಾಷ್ಟ್ರೀಯ ಉದ್ಯಾನದ ಯಾವುದೇ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿಲ್ಲ. 

ನಿರ್ದೇಶಕರ ಭೇಟಿ: ಈ ಮಧ್ಯೆ, ಬಂಡೀಪುರ ಹುಲಿಯೋಜನೆಯ ನಿರ್ದೇಶಕರಾಗಿ ನೇಮಕವಾಗಿರುವ ಬಾಲಚಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದು, ಬೆಂಕಿಗೆ ಆಯುತಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು