ಪತ್ರಿಕೋದ್ಯಮ ಪ್ರಾಧ್ಯಾಪಕರಿಗೆ ಅಲೆದಾಟದ ಶಿಕ್ಷೆ

7

ಪತ್ರಿಕೋದ್ಯಮ ಪ್ರಾಧ್ಯಾಪಕರಿಗೆ ಅಲೆದಾಟದ ಶಿಕ್ಷೆ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಸದ್ಯ ಅತಂತ್ರವಾಗಿದ್ದು, ಅಲ್ಲಿನ ಪ್ರಾಧ್ಯಾಪಕರು ಸೆಂಟ್ರಲ್‌ ಕಾಲೇಜಿಗೂ, ಜ್ಞಾನಜ್ಯೋತಿ ಆವರಣಕ್ಕೂ ಅಲೆದಾಡುವ ಸ್ಥಿತಿ ಇದೆ.

ಪತ್ರಿಕೋದ್ಯಮ ವಿಭಾಗದಲ್ಲಿ ಸದ್ಯ ನಾಲ್ವರು ಪ್ರಾಧ್ಯಾಪಕರಿದ್ದಾರೆ. ಜೊತೆಗೆ ಸಂಶೋಧನಾ ವಿದ್ಯಾರ್ಥಿಗಳು ಬೋಧನೆ ಮಾಡುತ್ತಿದ್ದಾರೆ. ಇವರು ಸೆಂಟ್ರಲ್ ಕಾಲೇಜು ಆವರಣದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ನಂತರ, ಇಲ್ಲಿಂದ 15 ಕಿ.ಮೀ ದೂರದಲ್ಲಿರುವ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಹೋಗಬೇಕು.

ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಾವಣೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಪತ್ರಿಕೋದ್ಯಮ ವಿಭಾಗದ ಬೋಧಕರು ಜ್ಞಾನಭಾರತಿ ಹಾಗೂ ಸೆಂಟ್ರಲ್ ಕಾಲೇಜು ಎರಡು ಕಡೆಯೂ ಬೋಧನೆ ಮಾಡಬೇಕಾಗುತ್ತದೆ.

ಮೂಲ ಸೌಕರ್ಯ, ಸಿಬ್ಬಂದಿ ಕೊರತೆಯಿಂದ ಪತ್ರಿಕೋದ್ಯಮ ಕೋರ್ಸ್ ಅನ್ನು 2018-19ನೇ ಸಾಲಿನಲ್ಲಿ ಆರಂಭಿಸದೇ ಇರಲು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಈಗಾಗಲೇ ನಿರ್ಧರಿಸಿದೆ. 

* ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗಕ್ಕೆ 414 ಅರ್ಜಿ ಬಂದಿದ್ದು, 40 ವಿದ್ಯಾರ್ಥಿಗಳಿಗೆ ಅವಕಾಶ ಇದೆ.

–ಪ್ರೊ. ಕೆ.ಆರ್.ವೇಣುಗೋಪಾಲ್, ಬೆಂಗಳೂರು ವಿ.ವಿ ಕುಲಪತಿ

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !