ಬುಧವಾರ, ಏಪ್ರಿಲ್ 21, 2021
30 °C

‘ಮನಸ್ಸಿಗೆ ಅಂಗವಿಕಲತೆ ಬಾಧಿಸದಿದ್ದರೆ ಉನ್ನತ ಸ್ಥಾನಕ್ಕೇರುವುದು ಸಾಧ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಯಾರೂ ಪರಿಪೂರ್ಣರಲ್ಲ. ಎಲ್ಲರಿಗೂ ಒಂದೊಂದು ಬಗೆಯ ಕೊರತೆಗಳಿರುತ್ತವೆ. ಎಲ್ಲರಿಗಿಂತ ಭಿನ್ನ ಕೊರತೆ ಎಂದು ಅಂಗವಿಕಲರು ಭಾವಿಸಬೇಕಾಗಿಲ್ಲ. ಅದನ್ನು ಮನಸ್ಸಿನಿಂದ ಕಿತ್ತೊಗೆದರೆ ಉನ್ನತ ಸ್ಥಾನಕ್ಕೇರುವುದು ಸಾಧ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಹೇಳಿದರು.

ವಿಶ್ವವಿದ್ಯಾಲಯದ ಬ್ರೈಲ್‌ ಸಂಪನ್ಮೂಲ ಕೇಂದ್ರ ಮತ್ತು ಎನೇಬಲ್‌ ಇಂಡಿಯಾ ವತಿಯಿಂದ ಶನಿವಾರ ನಡೆದ ‘ಅಂಧ ವ್ಯಕ್ತಿಗಳಿಗೆ ಉದ್ಯೋಗ ಅವಕಾಶ ಅರಿವು’ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಬ್ರೈಲ್ ಕೇಂದ್ರ ಮೂರು ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುತ್ತದೆ. ಆದರೆ ಈಗ ಇರುವ ಕೇಂದ್ರ ಚಿಕ್ಕದು ಎಂಬ ಕಾರಣಕ್ಕೆ ವಿಶಾಲ ಜಾಗಕ್ಕೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆದಿದೆ. ಈ ಕೇಂದ್ರವನ್ನು ಜ್ಞಾನಭಾರತಿಗೆ ಸ್ಥಳಾಂತರ ಮಾಡುವುದು ಸೂಕ್ತ. ಅಲ್ಲಿ ಸಾಕಷ್ಟು ಜಾಗವಿದೆ ಎಂದರು.

‘ವಿಶೇಷ ವಿದ್ಯಾರ್ಥಿಗಳಿಗೆ ಉದ್ಯೋಗದ ಕೊರತೆ ಎದುರಾಗಿಲ್ಲ. 18 ಸಾವಿರ ವಿಶೇಷ ಮಕ್ಕಳಿಗೆ ತರಬೇತಿ ನೀಡುವ ಅತ್ಯುತ್ತಮ ಕೆಲಸವನ್ನು ಎನೇಬಲ್ ಇಂಡಿಯಾ ಸಂಸ್ಥೆ ಮಾಡಿರುವುದು ಶ್ಲಾಘನೀಯ’ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕುಲಸಚಿವ ಪ್ರೊ.ಬಿ.ಕೆ.ರವಿ, ಅಂಗವಿಕಲ ವಿದ್ಯಾರ್ಥಿಗಳಲ್ಲಿ ಗಾಯನ ಮತ್ತು ಜ್ಞಾನ ಅಪರಿಮಿತವಾಗಿರುತ್ತದೆ. ಇದು ಅವರಲ್ಲಿರುವ ವಿಶೇಷ ಪ್ರತಿಭೆ. ಈ ಪ್ರತಿಭೆಯನ್ನೇ ಸಾಧನವಾಗಿ ಬಳಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಎನೇಬಲ್‌ ಇಂಡಿಯಾದ ಗೌರವ ನಿರ್ದೇಶಕ ಪ್ರಾಣೇಶ್‌ ನಗರಿ, ಪ್ರೀತಿ ಲೋಬೊ, ನವೀನ್‌ ಕುಮಾರ್‌, ಜಿ.ಆನಂದ, ಪ್ರೊ.ಜೆ.ಎಸ್‌.ಅರುಣಲತಾ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು