ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯ ಎರಡು ಪಾಳಿಗಳಲ್ಲಿ ತರಗತಿ

7

ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯ ಎರಡು ಪಾಳಿಗಳಲ್ಲಿ ತರಗತಿ

Published:
Updated:

ಬೆಂಗಳೂರು: ಮಲ್ಲೇಶ್ವರದ ಕೇಂದ್ರಿಯ ವಿದ್ಯಾಲಯದಲ್ಲಿ ಎರಡು ಪಾಳಿಗಳಲ್ಲಿ ತರಗತಿ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಅನುಮತಿ ನೀಡಿದೆ.

ಪ್ರಸ್ತುತ ಈ ಶಾಲೆಯಲ್ಲಿ ಒಂದರಿಂದ 6ನೇ ತರಗತಿವರೆಗೆ 1,836 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಒಂದೊಂದು ತರಗತಿಗೂ 3 ವಿಭಾಗಗಳಿದ್ದು, ಬೆಳಿಗ್ಗೆ 8.30ರಿಂದ ಮಧ್ಯಾಹ್ನ 2.40ವರೆಗೆ ತರಗತಿಗಳು ನಡೆಯುತ್ತಿತ್ತು.

ಜೂನ್‌ 21ರಿಂದ ಈ ಸಾಲಿನ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗಲಿದ್ದು, ಆಗ ಬೆಳಿಗ್ಗೆ 7ರಿಂದ ಮಧ್ಯಾಹ್ನ 12.25ರವರೆಗೆ ಒಂದು ಪಾಳಿ ಹಾಗೂ ಮಧ್ಯಾಹ್ನ 12.30ರಿಂದ ಸಂಜೆ 6ರವರೆಗೆ ಎರಡನೇ ಪಾಳಿಯಲ್ಲಿ ತರಗತಿಗಳು ನಡೆಯಲಿವೆ.

ದೇಶದಲ್ಲಿ ನಾಲ್ಕು ಕೇಂದ್ರೀಯ ವಿದ್ಯಾಲಯಗಳಿಗೆ ಮಾತ್ರ ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಇದು ಮೊದಲ ವಿದ್ಯಾಲಯವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry