ಶುಕ್ರವಾರ, ಸೆಪ್ಟೆಂಬರ್ 20, 2019
28 °C

ರೋಹಿಂಗ್ಯಾ ಮುಸ್ಲಿಮರ ರಕ್ಷಣೆ

Published:
Updated:

ಕಾಕ್ಸ್‌ ಬಜಾರ್‌, ಬಾಂಗ್ಲಾದೇಶ (ರಾಯಿಟರ್ಸ್‌): ಮಲೇಷ್ಯಾಗೆ ಅಕ್ರಮವಾಗಿ ಕರೆದೊಯ್ಯುತ್ತಿದ್ದ ರೋಹಿಂಗ್ಯಾ ಮುಸ್ಲಿಮರನ್ನು ಪೊಲೀಸರು ರಕ್ಷಿಸಿದ್ದಾರೆ. 

43 ಮಹಿಳೆಯರು ಮತ್ತು 11 ಮಕ್ಕಳು ಸೇರಿದಂತೆ 69 ಮಂದಿಯನ್ನು ಹಡಗಿನ ಮೂಲಕ ಸಾಗಣೆ ಮಾಡಲಾಗುತ್ತಿತ್ತು.  ಇಲ್ಲಿಯ ನಿರಾಶ್ರಿತರ ಶಿಬಿರದಲ್ಲಿದ್ದ ರೋಹಿಂಗ್ಯಾ ಮುಸ್ಲಿಮರಿಗೆ ಉದ್ಯೋಗ ನೀಡುವ ಆಮಿಷ ಒಡ್ಡಲಾಗಿತ್ತು. ‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಎಲ್ಲರನ್ನೂ ರಕ್ಷಿಸಿ ಶಿಬಿರಕ್ಕೆ ಕಳುಹಿಸಲಾಗಿದೆ. ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

2017ರಲ್ಲಿ 7 ಲಕ್ಷ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾ ಗಡಿ ದಾಟಿ ಹೋಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

Post Comments (+)