ಬುಧವಾರ, ಅಕ್ಟೋಬರ್ 16, 2019
28 °C

ಮೈಸೂರಿನಲ್ಲಿ ಸಾಲ ಮೇಳ 4ರಿಂದ

Published:
Updated:

ಮೈಸೂರು: ಕೇಂದ್ರ ಹಣಕಾಸು ಸಚಿವಾಲಯದ ಸೂಚನೆಯಂತೆ ಅ.4, 5ರಂದು ಸಾಲ ಮೇಳ ಆಯೋಜಿಸಲಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್‍ನ ಮುಖ್ಯ ಪ್ರಬಂಧಕರಾದ ಅರುಣಗಿರಿ ತಿಳಿಸಿದರು.

ಭಾರತೀಯ ಸ್ಟೇಟ್‌ ಬ್ಯಾಂಕ್‌ ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿನ ಮುಖ್ಯ ಶಾಖೆಯ ಆವರಣದಲ್ಲಿ ಈ ಮೇಳವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲ ಬ್ಯಾಂಕ್‌ಗಳ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಎರಡು ದಿನದ ಬಳಿಕವೂ ಸಾಲ ಮೇಳ ಜಿಲ್ಲೆಯ ಎಲ್ಲಾ ಬ್ಯಾಂಕ್‍ಗಳಲ್ಲೂ ಮುಂದುವರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೇಳದಲ್ಲಿ ಗ್ರಾಹಕರಿಗೆ ರಿಟೇಲ್ ಸಾಲ ನೀಡುವುದು, ಗೃಹ, ಕಾರು, ಕೃಷಿ, ಶೈಕ್ಷಣಿಕ, ಎಂ.ಎಸ್.ಎಂ.ಇ ಸಾಲ ಹಾಗೂ ವೈಯಕ್ತಿಕ ಸಾಲಗಳನ್ನು ನೀಡುವ ಗುರಿ ಹೊಂದಿದ್ದು, ಗ್ರಾಹಕರು ಉಳಿತಾಯ ಹಾಗೂ ಬಿ.ಎಸ್.ಬಿ.ಡಿ ಖಾತೆಗಳನ್ನು ಸಹ ತೆರೆಯಲು ಅವಕಾಶವಿದೆ ಎಂದು ತಿಳಿಸಿದರು.

ಮೈಸೂರು ಲೀಡ್ ಬ್ಯಾಂಕ್ ಮ್ಯಾನೇಜರ್ ವೆಂಕಟಚಲಾಪತಿ ಪತ್ರಿಕಾಗೋಷ್ಠಿಯಲ್ಲಿದ್ದರು.

Post Comments (+)