ಕೆ.ಬಸಣ್ಣ ಚಲವಾದಿ ನಿಧನ

ವಿಜಯಪುರ: ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಬಸಣ್ಣ ಚಲವಾದಿ (72) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಮಂಗಳವಾರ ನಿಧನರಾದರು.
ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬೌದ್ಧ ಧರ್ಮದ ವಿಧಿ–ವಿಧಾನಗಳಂತೆ ಬುಧವಾರ ವಿಜಯಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಸಣ್ಣ ಚಲವಾದಿ ವಕೀಲ ವೃತ್ತಿ ಜತೆಗೆ ಸಾಮಾಜಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ದಲಿತ ಸಂಘರ್ಷ ಸಮಿತಿ, ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಜನತಾ ಪಕ್ಷದಿಂದ ರಾಜಕೀಯ ಆರಂಭಿಸಿದ್ದರು. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಈ ಹಿಂದೆ ಅಹಿಂದ ಸಂಘಟನೆ ಸಂಘಟಿಸಿದ್ದ ಸಂದರ್ಭ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಸಿದ್ದರಾಮಯ್ಯ ಜತೆ ಕಾಂಗ್ರೆಸ್ಗೆ ಸೇರ್ಪಡೆಯಾಗಿ, ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
ಬರಹ ಇಷ್ಟವಾಯಿತೆ?
0
0
0
0
0
0 comments
View All