180 ಪಾದಚಾರಿ ಮಾರ್ಗಗಳ ಒತ್ತುವರಿ ತೆರವು

7
ವಿಶೇಷ ಕಾರ್ಯಾಚರಣೆ ಕೈಗೊಂಡ ಬಿಬಿಎಂಪಿ

180 ಪಾದಚಾರಿ ಮಾರ್ಗಗಳ ಒತ್ತುವರಿ ತೆರವು

Published:
Updated:

ಬೆಂಗಳೂರು: ಮಹದೇವಪುರ ವಲಯದ ವಿವಿಧ ಭಾಗಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ 180 ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ.

‘ಮೊದಲ ಹಂತದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಎರಡನೇ ಹಂತದಲ್ಲಿ ಅವುಗಳನ್ನು ದುರಸ್ತಿಗೊಳಿಸಿ ಜನರ ಸಂಚಾರಕ್ಕೆ ಅಣಿಗೊಳಿಸಲಾಗುವುದು’ ಎಂದು ಮುಖ್ಯ ಎಂಜಿನಿಯರ್‌ ಪರಮೇಶ್ವರಯ್ಯ ತಿಳಿಸಿದರು. 

‘ಪಾದಚಾರಿ ಮಾರ್ಗಗಳಲ್ಲಿ ಶಾಶ್ವತವಾಗಿ ಬೀಡುಬಿಟ್ಟವರನ್ನು ಅಲ್ಲಿಂದ ತೆರವುಗೊಳಿಸಿದ್ದು, ಇನ್ನೂ ಸಾಕಷ್ಟು ಜನ ಶಾಶ್ವತವಾಗಿ ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ಸದ್ಯ ಅವೆಲ್ಲವನ್ನೂ ತೆರವುಗೊಳಿಸುತ್ತೇವೆ’ ಎಂದರು.

‘ಪಾಲಿಕೆಯು ಸರ್ಜಾಪುರದ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ಶೀಘ್ರವೇ ತೆರವುಗೊಳಿಸಲು ನಿರ್ಧರಿಸಿದೆ. ಬೆಳ್ಳಂದೂರಿನ ಆರ್‌ಡಬ್ಲ್ಯೂಎಎಸ್‌ ಸಂಸ್ಥೆಯ ಸದಸ್ಯರು ಸರ್ಜಾಪುರ, ಹಲಸೂರು, ಬೆಳ್ಳಂದೂರು ಮುಖ್ಯರಸ್ತೆ ಮತ್ತು ಕಸವನಹಳ್ಳಿ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿ ಮಾರಾಟ ನಿರ್ಬಂಧಿಸುವಂತೆ ಒತ್ತಾಯಿಸಿ ಮೇಯರ್‌ ಸಂಪತ್‌ರಾಜ್‌ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಅವರು ಶನಿವಾರ ಮೇಯರ್‌ ಅವರನ್ನು ಭೇಟಿಯಾಗಲಿದ್ದಾರೆ’ ಎಂದರು. 

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !