ಟ್ಯಾಂಕ್‌ ನೆಲಸಮ: ಶಾಸಕ– ಪಾಲಿಕೆ ಸದಸ್ಯ ತಿಕ್ಕಾಟ

ಶುಕ್ರವಾರ, ಜೂನ್ 21, 2019
24 °C

ಟ್ಯಾಂಕ್‌ ನೆಲಸಮ: ಶಾಸಕ– ಪಾಲಿಕೆ ಸದಸ್ಯ ತಿಕ್ಕಾಟ

Published:
Updated:
Prajavani

ಕೆ.ಆರ್.ಪುರ: ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಪಾಲಿಕೆಯ ಬಿಜೆಪಿ ಸದಸ್ಯ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಜಿದ್ದಾಜಿದ್ದಿ ರಾಜಕೀಯ ಏರ್ಪಟ್ಟಿದೆ.

ವಿಜಿನಾಪುರ ವಾರ್ಡಿನ ರೈಲ್ವೆ ನಿಲ್ದಾಣ ಹಿಂಭಾಗದ ಯಲ್ಲಮ್ಮ ದೇವಸ್ಥಾನ ಬಳಿ 25 ವರ್ಷಕ್ಕೂ ಹಳೆಯದಾದ ಶಿಥಿಲವಾಗಿರುವ ಕುಡಿಯುವ ನೀರಿನ ಟ್ಯಾಂಕ್ ಇದೆ. ಪಾಲಿಕೆಯ ಸದಸ್ಯ ಬಂಡೆ ಎಸ್. ರಾಜು ನೀರಿನ ಟ್ಯಾಂಕ್ ತೆರವುಗೊಳಿಸಲು ಸೋಮವಾರ ಚಾಲನೆ ನೀಡಿದರು. ಟ್ಯಾಂಕ್ ನೆಲಸಮಗೊಳಿಸಲು ತಮ್ಮ ಬೆಂಬಲಿಗರೊಂದಿಗೆ ತೆರಳಿ ಪೂಜೆ ನೆರವೇರಿಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಜೆಸಿಬಿಗಳ ಮೂಲಕ ಟ್ಯಾಂಕ್ ನೆಲಸಮಗೊಳಿಸಲು ಸೂಚಿಸಿದರು. ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವುದರಿಂದ ಟ್ಯಾಂಕ್ ತೆರವುಗೊಳಿಸುತ್ತಿದ್ದೇವೆ ಎಂದರು.

ಶಾಸಕ ಬೈರತಿ ಬಸವರಾಜು ಮಂಗಳವಾರ ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ ಸ್ಥಳಕ್ಕೆ ಬಂದು ಟ್ಯಾಂಕ್ ನೆಲಸಮಗೊಳಿಸಲು ಪೂಜೆ ನೆರವೇರಿಸಿದರು.

‘ಇಲ್ಲಿ ವಿವಿಧ ಉದ್ದೇಶಕ್ಕಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತೇವೆ. ಬಹುಮಹಡಿ ಕಟ್ಟಡದಲ್ಲಿ ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕ, ಬೆಂಗಳೂರು ಒನ್ ಕೇಂದ್ರ ಆರಂಭ ಮಾಡುತ್ತೇವೆ’ ಎಂದು ಹೇಳಿದರು. ಅಭಿವೃದ್ಧಿ ವಿಚಾರದಲ್ಲಿ ಶಾಸಕ, ಪಾಲಿಕೆ ಸದಸ್ಯರ ಮುಸುಕಿನ ಗುದ್ದಾಟದಿಂದ ಸಾರ್ವಜನಿಕರು ಗೊಂದಲಕ್ಕೀಡಾದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !