ಪೌರಕಾರ್ಮಿಕರ ಸಾಂಕೇತಿಕ ಧರಣಿ 17ಕ್ಕೆ

ಬುಧವಾರ, ಜೂನ್ 19, 2019
31 °C

ಪೌರಕಾರ್ಮಿಕರ ಸಾಂಕೇತಿಕ ಧರಣಿ 17ಕ್ಕೆ

Published:
Updated:

ಬೆಂಗಳೂರು: ‘ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ವತಿಯಿಂದ ಇದೇ 17ರಂದು ಬೆಳಿಗ್ಗೆ 11.30ಕ್ಕೆ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ಮಹಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮೈಸೂರು ನಾರಾಯಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಬಿಬಿಎಂಪಿಯು 4 ಸಾವಿರ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಇದರ ಬದಲು 18,500 ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು. ಪೌರಕಾರ್ಮಿಕರು ಆಕಸ್ಮಿಕವಾಗಿ ಹಾಗೂ ಕೆಲಸದ ವೇಳೆ ಅಪಘಾತಕ್ಕೀಡಾಗಿ ಮರಣ ಹೊಂದಿದರೆ, ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಧನ ಒದಗಿಸಬೇಕು’ ಎಂದು ಒತ್ತಾಯಿದರು.

‘ವಿದ್ಯಾ ಸಂಸ್ಥೆಗಳಲ್ಲಿ ಆರ್‌ಟಿಇ ಕಾಯ್ದೆಯಡಿ ಪೌರ ಕಾರ್ಮಿಕರ ಮಕ್ಕಳಿಗೆ ಶೇ 75ರಷ್ಟು ಮೀಸಲಾತಿ ನಿಗದಿಪಡಿಸಬೇಕು. ಪೌರಕಾರ್ಮಿಕರಿಗೆ ತಿಂಗಳಿಗೆ ಮೂರು ದಿವಸ ವೇತನಸಹಿತ ರಜೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಬಿಬಿಎಂಪಿಯಲ್ಲಿ ಘನತ್ಯಾಜ್ಯ ವಿಲೇವಾರಿ ಟೆಂಡರ್‌ಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ 50ರಷ್ಟು ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !