ಗುರುವಾರ , ನವೆಂಬರ್ 21, 2019
20 °C

‘ಅನಧಿಕೃತ ಕೊಳವೆ ಬಾವಿ ಕೊರೆದರೆ ಕ್ರಮ’

Published:
Updated:

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿಗಳನ್ನು ಕೊರೆಸುವ ಕಟ್ಟಡದ ಮಾಲೀಕರ ಮತ್ತು ಕೊಳವೆ ಬಾವಿ ಡ್ರಿಲ್ಲಿಂಗ್‌ ಏಜೆನ್ಸಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳ ಲಾಗುವುದು ಎಂದು ಜಲಮಂಡಳಿ ಎಚ್ಚರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ದಾಗಿ ಕೊಳವೆ ಬಾವಿಗಳನ್ನು ಕೊರೆಯ ಬೇಕಾದಲ್ಲಿ ರಾಜ್ಯ ಅಂತರ್ಜಲ ಪ್ರಾಧಿ ಕಾರದಿಂದ ರಚಿಸಲಾಗಿರುವ ಬಿಬಿಎಂಪಿ ಸಮಿತಿಯಲ್ಲಿ ಅನುಮತಿ ಪಡೆಯಬೇಕು. ಈ ಸಮಿತಿಯಲ್ಲಿ ಬಿಬಿಎಂಪಿ, ಪೊಲೀಸ್‌ ಇಲಾಖೆ, ಬೆಸ್ಕಾಂ, ಜಲಮಂಡಳಿ, ಅಂತರ್ಜಲ ಪ್ರಾಧಿಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸದಸ್ಯರಾಗಿರುತ್ತಾರೆ.

ಅನಧಿಕೃತವಾಗಿ ಕೊಳವೆ ಬಾವಿಗಳನ್ನು ಕೊರೆಯುವುದು ಕಂಡು ಬಂದಲ್ಲಿ ಸಾರ್ವಜನಿಕರು ಈ ಇಲಾಖೆಗಳಿಗೆ ದೂರು ನೀಡಬಹುದು ಎಂದು ಜಲಮಂಡಳಿ ಹೇಳಿದೆ.

ಪ್ರತಿಕ್ರಿಯಿಸಿ (+)