ಗುತ್ತಿಗೆ ಸಮಸ್ಯೆ: ಪರಿಹಾರಕ್ಕೆ ಆಗ್ರಹ

ಶುಕ್ರವಾರ, ಜೂನ್ 21, 2019
24 °C

ಗುತ್ತಿಗೆ ಸಮಸ್ಯೆ: ಪರಿಹಾರಕ್ಕೆ ಆಗ್ರಹ

Published:
Updated:

ಬೆಂಗಳೂರು: ರಾಜ್ಯದಲ್ಲಿರುವ ಕೆಲವು ಕೈಗಾರಿಕಾ ಸಮೂಹಗಳು ಮೂರು ವರ್ಷಗಳಿಂದ ಎದುರಿಸುತ್ತಿರುವ ಭೂಮಿ ಗುತ್ತಿಗೆ ಪ್ರಕರಣಗಳನ್ನು ಕೂಡಲೇ ಸಕ್ರಮಗೊಳಿಸಬೇಕೆಂದು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

‘ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ ಕೈಗಾರಿಕಾ ವಲಯಕ್ಕೆ ಪೆಟ್ಟುಬೀಳಲಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕೆಗಳು ಬಂಡವಾಳ ಹೂಡಿಕೆ ಮಾಡುವುದಿಲ್ಲ. ಇದರಿಂದ ನೆರೆಯ ರಾಜ್ಯಗಳು ಲಾಭ ಪಡೆಯಲಿವೆ’ ಎಂದು ಮಂಡಳಿಯ ಅಧ್ಯಕ್ಷ ಕಿಶೋರ್ ಆಳ್ವ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ. ಜಿಂದಾಲ್‌ಗೆ ಜಮೀನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದ ಅನಗತ್ಯ. ಈ ವಿಚಾರ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದಕರ’ ಎಂದಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !