ಬಿಡಿಎ ನಿವೇಶನ ಹಂಚಿಕೆ ತಾತ್ಕಾಲಿಕ ಪಟ್ಟಿ ಪ್ರಕಟ

7

ಬಿಡಿಎ ನಿವೇಶನ ಹಂಚಿಕೆ ತಾತ್ಕಾಲಿಕ ಪಟ್ಟಿ ಪ್ರಕಟ

Published:
Updated:

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡನೇ ಹಂತದ ನಿವೇಶನ ಹಂಚಿಕೆಗೆ ಸಂಬಂಧಪಟ್ಟ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಪ್ರಕಟಿಸಿದೆ.

ಐದು ಸಾವಿರ ನಿವೇಶನಗಳ ಸಿದ್ಧಗೊಂಡ ತಾತ್ಕಾಲಿಕ ಪಟ್ಟಿಯನ್ನು ವೆಬ್‌ಸೈಟ್‌ www.bdabangalore.org ಮತ್ತು ಪ್ರಾಧಿಕಾರದ ಕೇಂದ್ರ ಕಚೇರಿಯ ಸೂಚನಾ ಫ‌ಲಕದಲ್ಲಿಯೂ ಸಹ ಪಟ್ಟಿ ಪ್ರದರ್ಶಿಸಿದೆ.

‌ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲು ತಡವಾಗಿತ್ತು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ತಪ್ಪುಗಳು ಕಂಡು ಬಂದಲ್ಲಿ ಜು.10ರೊಳಗೆ ಫಲಾನುಭವಿಗಳು ಪ್ರಾಧಿಕಾರದ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕಿದೆ. ಬಳಿಕ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ.

‌ಸಲ್ಲಿಸಿದ ಆಕ್ಷೇಪಗಳನ್ನು ಪರಿಶೀಲಿಸಿ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಗಣಕೀಕೃತ ಹಂಚಿಕೆ ಮೂಲಕ ನಿಗದಿಪಡಿಸಲಾಗಿದ್ದು, ಹಂಚಿಕೆಯಾಗದ ಅರ್ಜಿದಾರರಿಗೆ, ಸಲ್ಲಿಸಿದ ಆರಂಭಿಕ ಠೇವಣಿ ಮೊತ್ತವನ್ನು ಅವರ ಬ್ಯಾಂಕ್‌ ಖಾತೆಗೆ ಆರ್‌ಟಿಜಿಎಸ್‌ ಮೂಲಕ ಅಂತಿಮ ಪಟ್ಟಿ ಪ್ರಕಟಿಸಿದ ನಂತರ ವರ್ಗಾವಣೆ ಮಾಡಲಾಗುತ್ತದೆ ಎಂದು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !