ಗಾಂಧಿ ಭವನ ನಿರ್ಮಾಣಕ್ಕೆ ಸೂಚನೆ

ಸೋಮವಾರ, ಮಾರ್ಚ್ 18, 2019
31 °C

ಗಾಂಧಿ ಭವನ ನಿರ್ಮಾಣಕ್ಕೆ ಸೂಚನೆ

Published:
Updated:
Prajavani

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಗತಿಯಲ್ಲಿರುವ ಜಿಲ್ಲೆಗೊಂದು ಗಾಂಧಿ ಭವನ ನಿರ್ಮಾಣ ಕಾಮಗಾರಿಗಳನ್ನು ಅಕ್ಟೋಬರ್‌ ಒಳಗೆ ಪೂರ್ಣಗೊಳಿಸಿ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯಮಂತ್ರಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

‘ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಂಧಿ ಭವನದ ನಿರ್ಮಾಣಕ್ಕೆ ಸ್ಥಳ ಕಾಯ್ದಿರಿಸಿ, ನೀಲನಕ್ಷೆ ತಯಾರು ಮಾಡಲಾಗಿದೆ. ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಮುಗಿಯುವುದರೊಳಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಬೇಕು’ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ.ಕೃಷ್ಣ ಅವರು ಮನವಿ ಮಾಡಿದ್ದರು.

ಗಾಂಧಿ ವಿಚಾರಗಳನ್ನು ಪಸರಿಸುವ ಉದ್ದೇಶದಿಂದ, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಿಲ್ಲೆಗೊಂದು ಗಾಂಧಿ ಭವನ ನಿರ್ಮಿಸಲು ಯೋಜಿಸಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಕಾಮಗಾರಿಗಳು ಪ್ರಗತಿ ಕಾಣದೇ ಕುಂಠಿತಗೊಂಡಿದ್ದವು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !