ಭಾರತ ಬಂದ್: ಇಂದು ಶಾಲಾ ಕಾಲೇಜುಗಳಿಗೆ ರಜೆ

7

ಭಾರತ ಬಂದ್: ಇಂದು ಶಾಲಾ ಕಾಲೇಜುಗಳಿಗೆ ರಜೆ

Published:
Updated:

ಚಾಮರಾಜನಗರ: ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ (ಜ.9) ಮತ್ತು ಗುರುವಾರ (ಜ.9) ಭಾರತ ಬಂದ್‌ಗೆ ಕರೆ ನೀಡಿರುವುದರಿಂದ ಬುಧವಾರದಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು ತೆರೆದಿರಲಿವೆ. ಆಸ್ಪತ್ರೆಗಳು, ಮೆಡಿಕಲ್‌ಗಳು, ಹಾಲು, ಪತ್ರಿಕೆ ತುರ್ತು ಸೇವೆಗಳು ಎಂದಿನಂತೆ ಇರಲಿವೆ. 

ಪರಿಸ್ಥಿತಿ ಅವಲೋಕಿಸಿ ಕ್ರಮ: ಬಂದ್‌ನಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯುವ ಸಾಧ್ಯತೆ ಕಡಿಮೆ ಇದೆ. ಆದರೆ, ಅಧಿಕಾರಿಗಳು ಇದನ್ನು ಖಚಿತವಾಗಿ ಹೇಳಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೇಳಿದ್ದಾರೆ.

ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ‘ನಮಗೆ ಯಾವುದೇ ಸೂಚನೆ ಬಂದಿಲ್ಲ. ಹಾಗಾಗಿ ಖಾಸಗಿ ಬಸ್‌ಗಳು ಓಡಾಡಲಿವೆ’ ಎಂದು ಜಿಲ್ಲಾ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ವಿಜಯ ಕೃಷ್ಣ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !