ಹೊಸಕೋಟೆ: ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

7

ಹೊಸಕೋಟೆ: ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

Published:
Updated:
Prajavani

ಹೊಸಕೋಟೆ: ಕಾರ್ಮಿಕ ಸಂಘಟನೆಗಳು ನೀಡಿದ ಬಂದ್‌ ಕರೆಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯಿತು. ವ್ಯಾಪಾರಸ್ಥರು ಬೆಳಿಗ್ಗೆಯಿಂದಲೇ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೆಂಬಲ ಸೂಚಿಸಿದರು. ಸರ್ಕಾರಿ ಕಚೇರಿಗಳು ತೆರೆದಿದ್ದರೂ ಸಾರ್ವಜನಿಕರ ಹಾಜರಾತಿ ಇರಲಿಲ್ಲ. ಹೆದ್ದಾರಿ 75 ರಲ್ಲಿ ವಾಹನಗಳ ಸಂಚಾರ ಎಂದಿನಂತಿತ್ತು. ಹೋಬಳಿ ಕೇಂದ್ರವಾದ ಸೂಲಿಬೆಲೆ, ನಂದಗುಡಿಯಲ್ಲಿ ಮುಷ್ಕರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ.
ಮುಷ್ಕರ ಬೆಂಬಲಿಸಿ ತಾಲ್ಲೂಕು ಸಿಐಟಿಯು ಘಟಕದ ಅಧ್ಯಕ್ಷ ಹರೀಂದ್ರ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಂತ ರೈತ ಸಂಘದ ಸದಸ್ಯರು, ಕಾರ್ಮಿಕರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಆವರಣದಲ್ಲಿ ಸಭೆ ನಡೆಸಿದರು. 

ಬೊಮ್ಮನಹಳ್ಳಿ ವರದಿ: ಬೊಮ್ಮನಹಳ್ಳಿ, ಪರಪ್ಪನ ಅಗ್ರಹಾರ ಪ್ರದೇಶಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸೂರು ರಸ್ತೆಯಲ್ಲಿ ಸಿಐಟಿಯು ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಮೈಕೋ ಗುತ್ತಿಗೆ ಕಾರ್ಮಿಕರು ಹಾಗು ಸನ್ ಸೆರಾ ಕಾರ್ಖಾನೆ ಕಾರ್ಮಿಕರು ಕೂಡ್ಲು ಗೇಟ್, ಪರಪ್ಪನ ಅಗ್ರಹಾರದಲ್ಲಿ ಸೇರಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೊಮ್ಮನಹಳ್ಳಿ ವಿವೇಕಾನಂದ ವೃತ್ತದ ಬಳಿಯ ಹೊಸೂರು ಮುಖ್ಯರಸ್ತೆಯಲ್ಲಿ ರಸ್ತೆ ತಡೆ ನಡೆಯಿತು. ಬಂದ್‌ಗೆ ಪೀಸ್ ಆಟೋ ಸಂಘಟನೆ, ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್, ಬೀದಿಬದಿ ವ್ಯಾಪಾರಿಗಳ ಸಂಘ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ಬೆಂಬಲ ಸೂಚಿಸಿದ್ದವು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !