ಚುನಾವಣೆ ಗೆದ್ದರೆ ಈ ಕ್ಷೇತ್ರ ಬಿಜೆಪಿ ಭದ್ರಕೋಟೆ:ಮಲ್ಲಿಕಾರ್ಜುನಪ್ಪ

ಶುಕ್ರವಾರ, ಏಪ್ರಿಲ್ 26, 2019
35 °C

ಚುನಾವಣೆ ಗೆದ್ದರೆ ಈ ಕ್ಷೇತ್ರ ಬಿಜೆಪಿ ಭದ್ರಕೋಟೆ:ಮಲ್ಲಿಕಾರ್ಜುನಪ್ಪ

Published:
Updated:
Prajavani

ಚಾಮರಾಜನಗರ: ‘ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಮುಂಬರುವ ದಿನಗಳಲ್ಲಿ ಜಿಲ್ಲೆ ಹಾಗೂ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಲಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಹೇಳಿದರು.

ತಾಲ್ಲೂಕಿನ ಮಾದಾಪುರ, ಆಲೂತಾಲ್ಲೂಕಿನ ಮಾದಾಪುರ, ಆಲೂರು ಹಾಗೂ ಉಡಿಗಾಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಅವರ ಪರವಾಗಿ ಗುರುವಾರ ಮತಯಾಚನೆ ಮಾಡಿರು ಹಾಗೂ ಉಡಿಗಾಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಅವರ ಪರವಾಗಿ ಗುರುವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ, ಯಡಿಯೂರಪ್ಪ ಅವರ ವರ್ಚಸ್ಸಿನಿಂದ ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪ್ರಸಾದ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಮೋದಿ ಅವರು ಮತ್ತೋಮ್ಮೆ ಪ್ರಧಾನಿಯಾಗಬೇಕು ಎಂಬ ಕೂಗು ಎದ್ದಿದೆ. 1980ರಲ್ಲಿ ಇಂತಹ ವಾತಾವರಣ ಇಂದಿರಾ ಗಾಂಧಿ ಅವರಿಗೆ ಇತ್ತು. ಯಾರನ್ನೆ ಕೇಳಿದರೂ ಮೋದಿ ಅವರಿಗೆ ನಮ್ಮ ಬೆಂಬಲ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವರ್ಚಸ್ಸು, ಪಕ್ಷದ ಅಭ್ಯರ್ಥಿ ಪ್ರಸಾದ್ ಅವರ ಪ್ರಭಾವ ಇದೆ. ತಳಮಟ್ಟದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಕಮಲ ಕ್ಷೇತ್ರದಲ್ಲಿ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಾಲರಾಜು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಸವಣ್ಣ, ಮಂಡಲದ ಅಧ್ಯಕ್ಷ ಬಸವಣ್ಣ, ಮುಖಂಡರಾದ ಮಹದೇವಪ್ಪ, ಕಾಡಹಳ್ಳಿ ಕುಮಾರ್, ಮಾದಾಪುರ ರವಿಕುಮಾರ್, ಬೋಗಾಪುರ ಕುಮಾರಸ್ವಾಮಿ, ರಾಜಗೋಪಾಲ್ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !