ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಗುರುವಾರ , ಜೂನ್ 20, 2019
30 °C

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Published:
Updated:
Prajavani

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಫಲಿತಾಂಶ ಕುತೂಹಲಕಾರಿ ಘಟ್ಟ ತಲುಪುತ್ತಿದ್ದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿತ್ತು. ಕೊನೆ ಹಂತದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಗೆಲುವು ಖಚಿತವಾಗುತ್ತಿದ್ದಂತೆ ನೆರೆದಿದ್ದ ಕಾರ್ಯಕರ್ತರು ಗೆಲುವಿನ ಸೂಚನೆ ನೀಡುತ್ತಾ ವಿಜಯೋತ್ಸವ ಆಚರಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಸಂಜೆ ವೇಳೆಗೆ ಅನೇಕ ಕಾರ್ಯಕರ್ತರು ನೆರೆದರು. ಸುತ್ತಲೂ ಕಾರ್ಯಕರ್ತರು ಮೋದಿ, ಶ್ರೀನಿವಾಸಪ್ರಸಾದ್ ಹಾಗೂ ಗುಂಡ್ಲುಪೇಟೆ ಶಾಸಕ ನಿರಂಜನಕುಮಾರ್‌ ಅವರ ಹೆಸರು ಹೇಳುತ್ತಾ ಜೈಕಾರ ಕೂಗಿ, ಸಂಭ್ರಮಿಸಿದರು.

ಸಂಭ್ರಮಕ್ಕೆ ಮಳೆ ಅಡ್ಡಿ: ನಗರದಲ್ಲಿ ಸಂಜೆ ಪಕ್ಷದ ಸದಸ್ಯರು ಬಾವುಟ ಹಿಡಿದು ಬೈಕ್‌ ರ‍್ಯಾಲಿ ನಡೆಸಿದರು. ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಸಂಜೆ 7.30 ರಿಂದ 8.15 ಗಂಟೆಯ ವರೆಗೆ ಗುಡುಗು ಸಹಿತ ಜೋರು ಮಳೆ ಆರಂಭವಾಗಿ ಕಾರ್ಯಕರ್ತರ ಸಂಭ್ರಮಕ್ಕೆ ತಣ್ಣೀರೆರಚಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !